ಙ್ಞಾನೋಕ್ತಿಗಳು 30:6

ಆತನು ನಿನ್ನನ್ನು ಗದರಿಸುವಂತೆಯೂ ನೀನು ಸುಳ್ಳುಗಾರನೆಂದು ತೋರು ವಂತೆಯೂ ಆತನ ಮಾತುಗಳಿಗೆ ಯಾವದನ್ನು ಸೇರಿಸ ಬೇಡ.

ಸಂದರ್ಭದೊಂದಿಗೆ ಓದಿ · ಙ್ಞಾನೋಕ್ತಿಗಳು 30

4ಆಕಾಶಕ್ಕೆ ಏರಿದವನು ಇಲ್ಲವೆ ಇಳಿದವನು ಯಾರು? ತನ್ನ ಮುಷ್ಟಿಗಳಲ್ಲಿ ಗಾಳಿಯನ್ನು ಕೂಡಿಸಿದವನಾರು? ವಸ್ತ್ರದಲ್ಲಿ ನೀರನ್ನು ಕಟ್ಟಿದವ ನಾರು? ಭೂಮಿಯ ಕೊನೆಗಳನ್ನೆಲ್ಲಾ ಸ್ಥಾಪಿಸಿದವ ನಾರು? ನೀನು ಹೇಳುವದಾದರೆ ಆತನ ಹೆಸರೇನು? ಆತನ ಮಗನ ಹೆಸರೇನು?

5ದೇವರ ಪ್ರತಿಯೊಂದು ಮಾತು ಶುದ್ಧವಾಗಿದೆ; ಆತನಲ್ಲಿ ಭರವಸವಿಡುವವನಿಗೆ ಆತನು ಗುರಾಣಿಯಾಗಿದ್ದಾನೆ.

6ಆತನು ನಿನ್ನನ್ನು ಗದರಿಸುವಂತೆಯೂ ನೀನು ಸುಳ್ಳುಗಾರನೆಂದು ತೋರು ವಂತೆಯೂ ಆತನ ಮಾತುಗಳಿಗೆ ಯಾವದನ್ನು ಸೇರಿಸ ಬೇಡ.

7ನಿನ್ನಿಂದ ಎರಡನ್ನು ಕೇಳಿಕೊಂಡಿದ್ದೇನೆ; ನಾನು ಸಾಯುವದಕ್ಕಿಂತ ಮುಂಚೆ ಅವುಗಳನ್ನು ಕೊಡುವದಕ್ಕೆ ಹಿಂತೆಗೆಯಬೇಡ;

8ವ್ಯರ್ಥತ್ವವನ್ನೂ ಸುಳ್ಳುಗಳನ್ನೂ ನನ್ನಿಂದ ದೂರವಾಗಿ ತೆಗೆದುಹಾಕು. ಬಡತನವಾಗಲಿ ಐಶ್ವರ್ಯವಾಗಲಿ ನನಗೆ ಕೊಡಬೇಡ; ನನಗೆ ತಕ್ಕಷ್ಟು ಆಹಾರವನ್ನು ಭೋಜನ ಮಾಡಿಸು;

ಙ್ಞಾನೋಕ್ತಿಗಳು 30 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी