೨ ತಿಮೊಥೆಯನಿಗೆ 2:22

ಯೌವನದ ಇಚ್ಚೆಗಳಿಂದ ಸಹ ಓಡಿಹೋಗು; ಶುದ್ಧ ಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳು ವವರ ಸಂಗಡ ನೀತಿ ವಿಶ್ವಾಸ ಪ್ರೀತಿ ಸಮಾಧಾನ ಇವುಗಳನ್ನು ಅನುಸರಿಸು.

ಸಂದರ್ಭದೊಂದಿಗೆ ಓದಿ · ೨ ತಿಮೊಥೆಯನಿಗೆ 2

20ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ ಮರದ ಪಾತ್ರೆಗಳೂ ಮಣ್ಣಿನ ಪಾತ್ರೆಗಳೂ ಇರುತ್ತವೆ; ಕೆಲವು ಗೌರವಕ್ಕೂ ಕೆಲವು ಅಗೌರವಕ್ಕೂ ಇರುತ್ತವೆ.

21ಒಬ್ಬನು ತನ್ನನ್ನು ಇಂಥವುಗಳಿಂದ ಶುದ್ಧಪಡಿಸಿಕೊಂಡರೆ ಅವನು ಪ್ರತಿಷ್ಠಿತನೂ ಯಜಮಾನನ ಬಳಿಕೆಗೆ ಯೋಗ್ಯನೂ ಸಕಲಸತ್ಕಾರ್ಯಕ್ಕೆ ಸಿದ್ಧನೂ ಆಗಿದ್ದು ಗೌರವಕ್ಕೆ ಪಾತ್ರೆಯಾಗಿರುವನು.

22ಯೌವನದ ಇಚ್ಚೆಗಳಿಂದ ಸಹ ಓಡಿಹೋಗು; ಶುದ್ಧ ಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳು ವವರ ಸಂಗಡ ನೀತಿ ವಿಶ್ವಾಸ ಪ್ರೀತಿ ಸಮಾಧಾನ ಇವುಗಳನ್ನು ಅನುಸರಿಸು.

23ಮೂಢರ ಬುದ್ಧಿಯಿಲ್ಲದ ವಿಚಾರಗಳು ಜಗಳಗಳಿಗೆ ಕಾರಣವಾಗಿವೆ ಎಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.

24ಕರ್ತನ ಸೇವ ಕನು ಜಗಳವಾಡದೆ ಎಲ್ಲರ ವಿಷಯದಲ್ಲಿ ಸಾಧುವೂ ಬೋಧಿಸುವದರಲ್ಲಿ ಪ್ರವೀಣನೂ ತಾಳ್ಮೆಯುಳ್ಳವನೂ ಆಗಿರಬೇಕು.

೨ ತಿಮೊಥೆಯನಿಗೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी