೧ ಅರಸುಗಳು 17:12

ಅದಕ್ಕೆ ಅವಳು--ನಿನ್ನ ದೇವರಾದ ಕರ್ತನ ಜೀವದಾಣೆ, ಮಡಕೆಯಲ್ಲಿ ಒಂದು ಹಿಡಿ ಹಿಟ್ಟೂ ತಂಬಿಗೆಯಲ್ಲಿ ಸ್ವಲ್ಪ ಎಣ್ಣೆಯ ಹೊರತಾಗಿ ನನಗೆ ಬೇರೇನೂ ಇಲ್ಲ. ಇಗೋ, ನಾನೂ ನನ್ನ ಕುಮಾರನೂ ಅದನ್ನು ತಿಂದು ಸತ್ತುಹೋಗುವ ಹಾಗೆ ಅದನ್ನು ನನಗೂ ಅವನಿಗೂ ಸಿದ್ಧ ಮಾಡಲು ಎರಡು ಕಟ್ಟಿಗೆಗಳನ್ನು ಕೂಡಿಸಿಕೊಂಡಿದ್ದೇನೆ ಅಂದಳು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 17

10ಹಾಗೆಯೆ ಅವನೆದ್ದು ಚಾರೆಪ್ತಾಕ್ಕೆ ಹೋಗಿ ಪಟ್ಟಣದ ಬಾಗಿಲ ಬಳಿಗೆ ಬಂದಾಗ ಇಗೋ, ಅಲ್ಲಿ ಒಬ್ಬ ವಿಧವೆಯು ಕಟ್ಟಿಗೆಗಳನ್ನು ಆರಿಸಿಕೊಳ್ಳುತ್ತಾ ಇದ್ದಳು. ಅವನು ಅವಳನ್ನು ಕರೆದು--ನೀನು ದಯಮಾಡಿ ಕುಡಿ ಯುವದಕ್ಕೆ ಪಾತ್ರೆಯಲ್ಲಿ ಸ್ವಲ್ಪ ನೀರನ್ನು ತಕ್ಕೊಂಡುಬಾ ಅಂದನು.

11ಅವಳು ತಕ್ಕೊಂಡು ಬರಲು ಹೋಗು ತ್ತಿರುವಾಗ ಅವನು ಅವಳನ್ನು ಕರೆದು--ನೀನು ದಯ ಮಾಡಿ ನಿನ್ನ ಕೈಯಲ್ಲಿ ರೊಟ್ಟಿಯ ತುಂಡನ್ನು ನನಗೆ ತಕ್ಕೊಂಡು ಬಾ ಅಂದನು.

12ಅದಕ್ಕೆ ಅವಳು--ನಿನ್ನ ದೇವರಾದ ಕರ್ತನ ಜೀವದಾಣೆ, ಮಡಕೆಯಲ್ಲಿ ಒಂದು ಹಿಡಿ ಹಿಟ್ಟೂ ತಂಬಿಗೆಯಲ್ಲಿ ಸ್ವಲ್ಪ ಎಣ್ಣೆಯ ಹೊರತಾಗಿ ನನಗೆ ಬೇರೇನೂ ಇಲ್ಲ. ಇಗೋ, ನಾನೂ ನನ್ನ ಕುಮಾರನೂ ಅದನ್ನು ತಿಂದು ಸತ್ತುಹೋಗುವ ಹಾಗೆ ಅದನ್ನು ನನಗೂ ಅವನಿಗೂ ಸಿದ್ಧ ಮಾಡಲು ಎರಡು ಕಟ್ಟಿಗೆಗಳನ್ನು ಕೂಡಿಸಿಕೊಂಡಿದ್ದೇನೆ ಅಂದಳು.

13ಆಗ ಎಲೀಯನು ಅವಳಿಗೆ--ಭಯಪಡಬೇಡ; ನೀನು ಹೋಗಿ ನಿನ್ನ ಮಾತಿನ ಪ್ರಕಾರವೇ ಮಾಡು. ಆದರೆ ಮೊದಲು ಅದರಲ್ಲಿ ನನಗೆ ಒಂದು ಚಿಕ್ಕ ರೊಟ್ಟಿ ಮಾಡಿ, ನನ್ನ ಬಳಿಗೆ ತಕ್ಕೊಂಡು ಬಾ; ತರು ವಾಯ ನಿನಗೂ ನಿನ್ನ ಮಗನಿಗೂ ಸಿದ್ದಮಾಡಿಕೋ.

14ಕರ್ತನು ಭೂಮಿಯ ಮೇಲೆ ಮಳೆಯನ್ನು ಕೊಡುವ ವರೆಗೂ ಮಡಕೆಯಲ್ಲಿರುವ ಹಿಟ್ಟು ತೀರುವದಿಲ್ಲ; ತಂಬಿಗೆಯಲ್ಲಿರುವ ಎಣ್ಣೆಯು ಮುಗಿಯುವದಿಲ್ಲ ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳು ತ್ತಾನೆ ಅಂದನು.

೧ ಅರಸುಗಳು 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी