ನನ್ನನ್ನು ಬಲಪಡಿಸುವ ಕ್ರಿಸ್ತನ ಮೂಲಕ ನಾನು ಎಲ್ಲವುಗಳನ್ನು ಮಾಡಬಲ್ಲೆನು.
11ಕೊರತೆಯಲ್ಲಿದ್ದೇ ನೆಂದು ನಾನು ಇದನ್ನು ಹೇಳುವದಿಲ್ಲ; ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತುಷ್ಟನಾಗಿರುವದನ್ನು ಕಲಿತು ಕೊಂಡಿದ್ದೇನೆ.
12ನಾನು ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು, ನಾನು ತೃಪ್ತನಾಗಿ ದ್ದರೂ ಹಸಿದವನಾಗಿದ್ದರೂ ಸಮೃದ್ಧಿಯುಳ್ಳವನಾದರೂ ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲಿರುವವನಾದರೂ ಅವೆಲ್ಲವುಗಳನ್ನು ನಾನು ಕಲಿತು ಕೊಂಡಿದ್ದೇನೆ.
13ನನ್ನನ್ನು ಬಲಪಡಿಸುವ ಕ್ರಿಸ್ತನ ಮೂಲಕ ನಾನು ಎಲ್ಲವುಗಳನ್ನು ಮಾಡಬಲ್ಲೆನು.
14ಹೀಗಿದ್ದರೂ ನೀವು ನನ್ನ ಸಂಕಟದಲ್ಲಿ ಪಾಲುಗಾರ ರಾಗಿದ್ದದ್ದು ಒಳ್ಳೇದಾಯಿತು.
15ಇದಲ್ಲದೆ ಫಿಲಿಪ್ಪಿ ಯವರೇ, ಸುವಾರ್ತೆಯ ಪ್ರಾರಂಭದಲ್ಲಿ ನಾನು ಮಕೆದೋನ್ಯದಿಂದ ಹೊರಟಾಗ ಕೊಡುವದರ ಮತ್ತು ತೆಗೆದುಕೊಳ್ಳುವದರ ವಿಷಯದಲ್ಲಿ ನಿಮ್ಮ ಹೊರತು ಬೇರೆ ಸಭೆಯು ನನ್ನೊಂದಿಗೆ ಭಾಗವಹಿಸಲಿಲ್ಲವೆಂದು ನೀವು ಸಹ ಬಲ್ಲಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ