ಪ್ರಕಟನೆ 18:2

ಅವನು ಗಟ್ಟಿ ಯಾದ ಶಬ್ದದಿಂದ ಕೂಗುತ್ತಾ--ಮಹಾಬಾಬೆಲ್‌ ಬಿದ್ದಳು, ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಪಂಜರವೂ ಆದಳು.

ಸಂದರ್ಭದೊಂದಿಗೆ ಓದಿ · ಪ್ರಕಟನೆ 18

1ಇವುಗಳಾದ ಮೇಲೆ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೂತನು ಪರಲೋಕದಿಂದ ಇಳಿಯುವದನ್ನು ಕಂಡೆನು; ಅವನ ಪ್ರಭಾವದಿಂದ ಭೂಮಿಗೆ ಪ್ರಕಾಶವುಂಟಾಯಿತು.

2ಅವನು ಗಟ್ಟಿ ಯಾದ ಶಬ್ದದಿಂದ ಕೂಗುತ್ತಾ--ಮಹಾಬಾಬೆಲ್‌ ಬಿದ್ದಳು, ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಪಂಜರವೂ ಆದಳು.

3ಎಲ್ಲಾ ಜನಾಂಗಗಳು ಅವಳ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳ ಅತಿಶಯವಾದ ವೈಭವದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು.

4ಪರಲೋಕದಿಂದ ಮತ್ತೊಂದು ಶಬ್ದವನ್ನು ನಾನು ಕೇಳಿದೆನು; ಅದು--ನನ್ನ ಜನರೇ, ಅವಳಿಂದ ಹೊರಗೆ ಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗ ಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿ ಯಾಗಬಾರದು.

ಪ್ರಕಟನೆ 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी