ಆದದರಿಂದ ಕುರುಬರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ.
5ಅವು ಚದರಿಹೋದವು; ಯಾಕಂದರೆ ಅಲ್ಲಿ ಕುರುಬ ರಿಲ್ಲ; ಅವರು ಚದರಿಹೋದಾಗ ಬಯಲಿನಲ್ಲಿರುವ ಎಲ್ಲಾ ಮೃಗಗಳಿಗೆ ಆಹಾರವಾದವು.
6ನನ್ನ ಕುರಿಗಳು ಎಲ್ಲಾ ಪರ್ವತಗಳ ಮೇಲೆಯೂ ಪ್ರತಿಯೊಂದು ಎತ್ತರವಾದ ಬೆಟ್ಟಗಳ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯು ಭೂಮಂಡಲದಲ್ಲೆಲ್ಲಾ ಚದರಿ ಹೋಗಿದೆ; ಯಾವನೂ ಅವುಗಳಿಗಾಗಿ ವಿಚಾರಿಸಲಿಲ್ಲ ಅಥವಾ ಹುಡುಕಲಿಲ್ಲ.
7ಆದದರಿಂದ ಕುರುಬರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ.
8ದೇವ ರಾದ ಕರ್ತನು ಹೀಗೆ ಹೇಳುತ್ತಾನೆ; ನನ್ನ ಜೀವದಾಣೆ, ನಿಶ್ಚಯವಾಗಿ ನನ್ನ ಮಂದೆಯು ಕೊಳ್ಳೆಯಾದದ ರಿಂದಲೂ ನನ್ನ ಮಂದೆಯು ಕುರುಬ ನಿಲ್ಲದೆ ಬಯಲಿನ ಮೃಗಗಳಿಗೆಲ್ಲಾ ಆಹಾರವಾದದ್ದರಿಂದಲೂ ನನ್ನ ಕುರು ಬರು ನನ್ನ ಮಂದೆಯನ್ನು ಹುಡುಕದೆ ಇದ್ದದರಿಂದಲೂ ಕುರುಬರು ತಮ್ಮನ್ನು ಮೇಯಿಸಿಕೊಂಡರೇ ಹೊರತು ತಮ್ಮ ಕುರಿಗಳನ್ನು ಮೇಯಿಸದಿದ್ದದರಿಂದಲೂ
9ಓ ಕುರುಬರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ