ಯಾಕೋಬನ ಮತ್ತು ಯೋಸೇಫನ ಮಕ್ಕಳಾದ ನಿನ್ನ ಜನರನ್ನು ತೋಳಿನಿಂದ ವಿಮೋಚನೆ ಮಾಡಿದ್ದೀ ಸೆಲಾ.
13ಓ ದೇವರೇ, ನಿನ್ನ ಮಾರ್ಗವು ಪರಿಶುದ್ಧ ಆಲಯದಲ್ಲಿದೆ; ನಮ್ಮ ದೇವರಂತೆ ದೊಡ್ಡ ದೇವರು ಯಾರು?
14ಅದ್ಭುತಗಳನ್ನು ನಡಿಸುವ ದೇವರು ನೀನೇ; ನಿನ್ನ ಬಲವನ್ನು ಜನರಲ್ಲಿ ತೋರಿಸಿದ್ದೀ.
15ಯಾಕೋಬನ ಮತ್ತು ಯೋಸೇಫನ ಮಕ್ಕಳಾದ ನಿನ್ನ ಜನರನ್ನು ತೋಳಿನಿಂದ ವಿಮೋಚನೆ ಮಾಡಿದ್ದೀ ಸೆಲಾ.
16ನೀರು ಗಳು ನಿನ್ನನ್ನು ನೋಡಿದವು; ಓ ದೇವರೇ, ನೀರುಗಳು ನಿನ್ನನ್ನು ನೋಡಿ ಭ್ರಮೆಗೊಂಡವು; ಅಗಾಧಗಳು ನಡುಗಿದವು.
17ಮೋಡಗಳು ನೀರನ್ನು ಸುರಿಸಿದವು; ಆಕಾಶಗಳು ಶಬ್ದ ಮಾಡಿದವು; ನಿನ್ನ ಬಾಣಗಳು ಸಹ ಹಾರಿ ಬಂದವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ