ಯೆಶಾಯ 61:8

ಕರ್ತನಾದ ನಾನು ನ್ಯಾಯವನ್ನು ಪ್ರೀತಿಮಾಡು ತ್ತೇನೆ, ಸುಲಿಗೆಯಿಂದಾದ ದಹನಬಲಿಯನ್ನು ಹಗೆ ಮಾಡುತ್ತೇನೆ. ಅವರ ಕೆಲಸವನ್ನು ಸತ್ಯದಲ್ಲಿ ನಡಿಸು ತ್ತೇನೆ; ಅವರ ಸಂಗಡ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ.

ಸಂದರ್ಭದೊಂದಿಗೆ ಓದಿ · ಯೆಶಾಯ 61

6ಆದರೆ ನಿಮಗೆ ಕರ್ತನ ಯಾಜಕರೆಂದು ಹೆಸರಿಡುವರು ನೀವು ನಮ್ಮ ದೇವರ ಸೇವಕರೆಂದು ಜನರು ಕರೆಯುವರು. ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ; ಅವರ ಮಹಿಮೆಯಲ್ಲಿ ನೀವು ಹೆಚ್ಚಳಪಡುವಿರಿ.

7ನಿಮ್ಮ ಅವಮಾನಕ್ಕೆ ಬದಲಾಗಿ ಮಾನವು ಎರಡರಷ್ಟಾಗು ವದು. ಬದಲಾಗಿ ತಮ್ಮ ಪಾಲಿನಲ್ಲಿ ಹರ್ಷಿಸುವರು; ಆದದರಿಂದ ತಮ್ಮ ದೇಶದಲ್ಲಿ ಎರಡರಷ್ಟು ಸ್ವಾಧೀನ ಮಾಡಿಕೊಳ್ಳುವರು, ನಿತ್ಯವಾದ ಸಂತೋಷವು ಅವರಿಗೆ ಆಗುವದು.

8ಕರ್ತನಾದ ನಾನು ನ್ಯಾಯವನ್ನು ಪ್ರೀತಿಮಾಡು ತ್ತೇನೆ, ಸುಲಿಗೆಯಿಂದಾದ ದಹನಬಲಿಯನ್ನು ಹಗೆ ಮಾಡುತ್ತೇನೆ. ಅವರ ಕೆಲಸವನ್ನು ಸತ್ಯದಲ್ಲಿ ನಡಿಸು ತ್ತೇನೆ; ಅವರ ಸಂಗಡ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ.

9ಆಗ ಅವರ ಸಂತಾನವು ಅನ್ಯ ಜನಾಂಗಗಳಲ್ಲಿಯೂ ಅವರಿಂದಾದ ಸಂತತಿಯು ಜನ ಗಳ ಮಧ್ಯದಲ್ಲಿಯೂ ತಿಳಿಸಲ್ಪಡುವದು; ಅವರನ್ನು ನೋಡುವವರೆಲ್ಲರೂ--ಅವರೇ ಕರ್ತನು ಆಶೀರ್ವದಿ ಸಿದ ಸಂತಾನವೆಂದು ಒಪ್ಪಿಕೊಳ್ಳುವರು.

10ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.

ಯೆಶಾಯ 61 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी