ಯಾಜಕಕಾಂಡ 22:10

ಪರಿಶುದ್ಧವಾದದ್ದನ್ನು ಪರಕೀಯನು ತಿನ್ನಬಾರದು. ಯಾಜಕನ ಪ್ರವಾಸಿಯಾಗಲಿ ಇಲ್ಲವೆ ಕೂಲಿ ಆಳಾಗಲಿ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 22

8ತನ್ನನ್ನು ಹೊಲೆಮಾಡಿಕೊಳ್ಳದಂತೆ ತನ್ನಷ್ಟಕ್ಕೆ ತಾನೇ ಸತ್ತಿರುವದನ್ನಾಗಲಿ ಇಲ್ಲವೆ ಮೃಗಗಳಿಂದ ಹರಿಯಲ್ಪಟ್ಟದ್ದನ್ನಾಗಲಿ ತಿನ್ನಬಾರದು; ನಾನೇ ಕರ್ತನು.

9ಆದದರಿಂದ ಅವರು ಅದನ್ನು ಅಪವಿತ್ರಪಡಿಸಿದರೆ ಅದರ ನಿಮಿತ್ತವಾಗಿ ಪಾಪವನ್ನು ಹೊತ್ತು ಸಾಯದಂತೆ ನನ್ನ ವಿಧಿಗಳನ್ನು ಕೈಕೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.

10ಪರಿಶುದ್ಧವಾದದ್ದನ್ನು ಪರಕೀಯನು ತಿನ್ನಬಾರದು. ಯಾಜಕನ ಪ್ರವಾಸಿಯಾಗಲಿ ಇಲ್ಲವೆ ಕೂಲಿ ಆಳಾಗಲಿ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು.

11ಆದರೆ ಯಾಜಕನು ಯಾವನನ್ನಾದರೂ ತನ್ನ ಹಣದಿಂದ ಕೊಂಡುಕೊಂಡರೆ ಅವನು ಅದರಲ್ಲಿ ತಿನ್ನಬೇಕು, ಅವನ ಮನೆಯಲ್ಲಿ ಹುಟ್ಟಿದವನು ತಿನ್ನಲಿ; ಅವರು ಅವನ ಆಹಾರವನ್ನು ತಿನ್ನಲಿ.

12ಯಾಜಕನ ಮಗಳು ಒಬ್ಬ ಪರಕೀಯನನ್ನು ಮದುವೆಯಾದರೆ ಅವಳು ಸಮ ರ್ಪಣೆಯಾದ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು.

ಯಾಜಕಕಾಂಡ 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी