೧ ಅರಸುಗಳು 7:27

ಹತ್ತು ತಾಮ್ರದ ಆಧಾರಗಳನ್ನು ಮಾಡಿದನು. ಒಂದೊಂದು ಆಧಾರವು ನಾಲ್ಕು ಮೊಳ ಉದ್ದವೂ ನಾಲ್ಕು ಮೊಳ ಅಗಲವೂ ಮೂರು ಮೊಳ ಎತ್ತರವೂ ಆಗಿತ್ತು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 7

25ಅದು ಹನ್ನೆರಡು ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರಕ್ಕೂ ಮೂರು ಪಶ್ಚಿಮಕ್ಕೂ ಮೂರು ದಕ್ಷಿಣಕ್ಕೂ ಮೂರು ಪೂರ್ವಕ್ಕೂ ನೋಡುತ್ತಾ ಇದ್ದವು. ಆ ಸಮುದ್ರವು ಅವುಗಳ ಮೇಲೆ ಇತ್ತು; ಅವುಗಳ ಹಿಂಭಾಗಗಳೆಲ್ಲಾ ಒಳಪಾರ್ಶ್ವದಲ್ಲಿ ಇದ್ದವು.

26ಅದರ ದಪ್ಪವು ಕೈಯಷ್ಟಾಗಿಯೂ ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ ತಾವರೆ ಪುಷ್ಪದ ಹಾಗೆಯೂ ಇತ್ತು. ಅದು ಎರಡು ಸಾವಿರ ಕೊಳಗ ಹಿಡಿಯು ವದಾಗಿತ್ತು.

27ಹತ್ತು ತಾಮ್ರದ ಆಧಾರಗಳನ್ನು ಮಾಡಿದನು. ಒಂದೊಂದು ಆಧಾರವು ನಾಲ್ಕು ಮೊಳ ಉದ್ದವೂ ನಾಲ್ಕು ಮೊಳ ಅಗಲವೂ ಮೂರು ಮೊಳ ಎತ್ತರವೂ ಆಗಿತ್ತು.

28ಆ ಆಧಾರಗಳ ಮೇಲಿರುವ ಕೆಲಸ ಹೇಗಂದರೆ, ಅವುಗಳಿಗೆ ಅಂಚುಗಳಿದ್ದವು. ಅಂಚುಗಳು ಹಲಿಗೆಗಳ ನಡುವೆ ಇದ್ದವು.

29ಹಲಿಗೆಗಳ ನಡುವೆ ಇರುವ ಆ ಅಂಚುಗಳಲ್ಲಿ ಸಿಂಹಗಳೂ ಎತ್ತುಗಳೂ ಕೆರೂಬಿಗಳೂ ಇದ್ದವು. ಹಲಿಗೆಗಳ ಮೇಲ್ಭಾಗದಲ್ಲಿ ಒಂದು ಅಂಚು ಇತ್ತು; ಸಿಂಹಗಳಿಗೂ ಎತ್ತುಗಳಿಗೂ ಕೆಳಭಾಗದಲ್ಲಿ ಕೆರೂಬಿಗಳ ಕೆಲಸಗಳು ಅದರ ಸಂಗಡ ಇದ್ದವು.

೧ ಅರಸುಗಳು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी