ಯೆಹೆಜ್ಕೇಲನು 20:15

ಆದಾಗ್ಯೂ ಹಾಲೂ ಜೇನೂ ಹರಿಯುವಂಥ ದೇಶ ಗಳಿಗೆ ಕೀರ್ತಿಯಾಗಿರುವಂಥ ಆ ದೇಶದಲ್ಲಿ ಅವರನ್ನು ಸೇರಿಸುವದಿಲ್ಲವೆಂದು ಅರಣ್ಯದಲ್ಲಿ ಅವರಿಗೆ ನನ್ನ ಕೈ ಎತ್ತಿದೆನು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 20

13ಆದರೆ ಇಸ್ರಾಯೇಲಿನ ಮನೆತನದವರು ಅರಣ್ಯದಲ್ಲಿಯೂ ನನಗೆ ವಿರುದ್ಧ ವಾಗಿ ತಿರುಗಿಬಿದ್ದರು; ಆಜ್ಞಾವಿಧಿಗಳನ್ನು ಅನುಸರಿಸುವ ಮನುಷ್ಯನು ಬದುಕುವನು. ಅವುಗಳಲ್ಲಿ ನಡೆಯದೆ ನನ್ನ ನ್ಯಾಯಗಳನ್ನು ಅಸಡ್ಡೆ ಮಾಡಿ ನನ್ನ ಸಬ್ಬತ್‌ ದಿನಗಳನ್ನು ಸಹ ಬಹಳವಾಗಿ ಅಪವಿತ್ರಪಡಿಸಿದರು; ಆಗ ನಾನು ಅವರ ಮೇಲೆ ನನ್ನ ರೋಷದಿಂದ ದಹಿಸಿಬಿಡುವೆನೆಂದು ಹೇಳಿದೆನು.

14ಆದರೆ ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಬರಮಾಡಿದೆನೋ ಆ ಅನ್ಯಜನಾಂಗಗಳ ದೃಷ್ಟಿಯಲ್ಲಿ ಅಪವಿತ್ರವಾಗದ ಹಾಗೆ ನನ್ನ ಹೆಸರಿಗಾಗಿಯೇ ಕೆಲಸ ಮಾಡಿದೆನು.

15ಆದಾಗ್ಯೂ ಹಾಲೂ ಜೇನೂ ಹರಿಯುವಂಥ ದೇಶ ಗಳಿಗೆ ಕೀರ್ತಿಯಾಗಿರುವಂಥ ಆ ದೇಶದಲ್ಲಿ ಅವರನ್ನು ಸೇರಿಸುವದಿಲ್ಲವೆಂದು ಅರಣ್ಯದಲ್ಲಿ ಅವರಿಗೆ ನನ್ನ ಕೈ ಎತ್ತಿದೆನು.

16ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತವಾಗಿ ನನ್ನ ನಿಯಮಗಳನ್ನು ಅನುಸರಿಸದೆ ನಿರಾಕರಿಸಿ ನಾನು ನೇಮಿಸಿದ ಸಬ್ಬತ್‌ ದಿನಗಳನ್ನು ಅಪವಿತ್ರ ಮಾಡಿದರು.

17ಆದರೂ ಅವರನ್ನು ನಾನು ನಾಶಮಾಡದ ಹಾಗೆ ನನ್ನ ಕಣ್ಣು ಕನಿಕರಿಸಿತು; ನಾನು ಅವರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ಮುಗಿಸಿಬಿಡ ಲಿಲ್ಲ.

ಯೆಹೆಜ್ಕೇಲನು 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी