ಜೆಕರ್ಯ 12:12

ದೇಶವು ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕವಾಗಿ ಗೋಳಾಡುವದು; ದಾವೀದನ ಮನೆಯ ಗೋತ್ರವು ಪ್ರತ್ಯೇಕ ಅವರ ಹೆಂಡತಿಯರು ಪ್ರತ್ಯೇಕ; ನಾತಾನನ ಮನೆತನದ ಗೋತ್ರವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ.

ಸಂದರ್ಭದೊಂದಿಗೆ ಓದಿ · ಜೆಕರ್ಯ 12

10ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.

11ಮೆಗಿದ್ದೋವಿನ ತಗ್ಗಿನಲ್ಲಾದ ಹದದ್‌ ರಿಮ್ಮೊನಿನ ಗೋಳಾಟದ ಹಾಗೆ ಆ ದಿನ ದಲ್ಲಿ ಯೆರೂಸಲೇಮಿನೊಳಗೆ ಮಹಾಗೋಳಾಟವಿ ರುವದು.

12ದೇಶವು ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕವಾಗಿ ಗೋಳಾಡುವದು; ದಾವೀದನ ಮನೆಯ ಗೋತ್ರವು ಪ್ರತ್ಯೇಕ ಅವರ ಹೆಂಡತಿಯರು ಪ್ರತ್ಯೇಕ; ನಾತಾನನ ಮನೆತನದ ಗೋತ್ರವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ.

13ಲೇವಿಯರ ಮನೆತ ನದ ಗೋತ್ರವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ; ಶಿಮ್ಮಿಯನ ಗೋತ್ರವು ಪ್ರತ್ಯೇಕ, ಅವರ ಹೆಂಡತಿ ಯರು ಪ್ರತ್ಯೇಕ.

14ಉಳಿದ ಗೋತ್ರಗ ಳೆಲ್ಲಾ ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕವಾ ಗಿಯೂ ಅವರ ಹೆಂಡತಿಯರು ಪ್ರತ್ಯೇಕವಾಗಿಯೂ ಗೋಳಾಡುವರು.

ಜೆಕರ್ಯ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी