೨ ಸಮುವೇಲನು 12:6

ಅವನು ಕರುಣೆ ಯಿಲ್ಲದೆ ಈ ಕಾರ್ಯವನ್ನು ಮಾಡಿದ್ದರಿಂದ ಆ ಕುರಿ ಗೋಸ್ಕರ ನಾಲ್ಕರಷ್ಟು ತಿರಿಗಿ ಕೊಡಬೇಕು ಅಂದನು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 12

4ಐಶ್ವರ್ಯವುಳ್ಳ ಆ ಮನು ಷ್ಯನ ಬಳಿಗೆ ಒಬ್ಬ ಪ್ರಯಾಣಿಕನು ಬಂದಾಗ ಪ್ರಯಾಣ ಮಾಡುವವನಿಗೆ ಅಡಿಗೆಯನ್ನು ಮಾಡಿಸುವದಕ್ಕೆ ತನ್ನ ಕುರಿ ಪಶುಗಳಲ್ಲಿ ಒಂದನ್ನೂ ತಕ್ಕೊಳ್ಳ ಮನಸ್ಸಿಲ್ಲದೆ ಆ ಬಡವನ ಕುರಿಯನ್ನು ತಕ್ಕೊಂಡು ಅದನ್ನು ತನ್ನ ಬಳಿಗೆ ಬಂದ ಆ ಮನುಷ್ಯನಿಗೆ ಅಡಿಗೆಯನ್ನು ಮಾಡಿಸಿ ದನು ಅಂದನು.

5ಆಗ ದಾವೀದನು ಆ ಮನುಷ್ಯನ ಮೇಲೆ ಬಹಳ ಕೋಪಿಸಿಕೊಂಡು ನಾತಾನನಿಗೆ--ಕರ್ತನ ಜೀವದಾಣೆ, ಇದನ್ನು ಮಾಡಿದ ಆ ಮನುಷ್ಯನು ನಿಜವಾಗಿಯೂ ಸಾಯಬೇಕು.

6ಅವನು ಕರುಣೆ ಯಿಲ್ಲದೆ ಈ ಕಾರ್ಯವನ್ನು ಮಾಡಿದ್ದರಿಂದ ಆ ಕುರಿ ಗೋಸ್ಕರ ನಾಲ್ಕರಷ್ಟು ತಿರಿಗಿ ಕೊಡಬೇಕು ಅಂದನು.

7ಆಗ ನಾತಾನನು ದಾವೀದನಿಗೆ--ನೀನೇ ಆ ಮನು ಷ್ಯನು. ಇಸ್ರಾಯೇಲಿನ ದೇವರಾದ ಕರ್ತನು--ನಾನು ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು

8ನಿನ್ನ ಯಜಮಾನನ ಮನೆಯನ್ನೂ ನಿನ್ನ ಯಜಮಾನನ ಹೆಂಡತಿಯರನ್ನೂ ನಿನ್ನ ಎದೆಗೆ ಕೊಟ್ಟು ಇಸ್ರಾಯೇಲಿನ ಮನೆಯನ್ನೂ ಯೆಹೂದದ ಮನೆಯನ್ನೂ ನಿನಗೆ ಕೊಟ್ಟೆನು.

೨ ಸಮುವೇಲನು 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी