೨ ಪೂರ್ವಕಾಲವೃತ್ತಾಂತ 10:8

ಆದರೆ ಹಿರಿಯರು ತನಗೆ ಹೇಳಿದ ಆಲೋಚನೆಯನ್ನು ಬಿಟ್ಟು ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋಚನೆಯನ್ನು ಅವನು ಕೇಳಿ ಅವರಿಗೆ--

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 10

6ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನು ಬದುಕಿರುವಾಗ ಅವನ ಮುಂದೆ ನಿಲ್ಲುತ್ತಿದ್ದ ಹಿರಿಯರ ಆಲೋಚನೆಯನ್ನು ಕೇಳಿ-- ಈ ಜನರಿಗೆ ಪ್ರತ್ಯುತ್ತರಕೊಡಲು ನೀವು ಏನು ಆಲೋಚನೆ ಹೇಳುತ್ತೀರಿ ಅಂದನು.

7ಅವರು ಅವ ನಿಗೆ--ನೀನು ಈ ಜನರಿಗೆ ದಯವುಳ್ಳವನಾಗಿ ಅವ ರನ್ನು ಮೆಚ್ಚಿಸಿ ಅವರಿಗೆ ಒಳ್ಳೇ ಮಾತುಗಳನ್ನು ಆಡಿದರೆ ಅವರು ಎಂದೆಂದಿಗೂ ನಿನ್ನ ಸೇವಕರಾಗಿರುವರು ಅಂದರು.

8ಆದರೆ ಹಿರಿಯರು ತನಗೆ ಹೇಳಿದ ಆಲೋಚನೆಯನ್ನು ಬಿಟ್ಟು ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋಚನೆಯನ್ನು ಅವನು ಕೇಳಿ ಅವರಿಗೆ--

9ನಿನ್ನ ತಂದೆಯು ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಪ್ರತ್ಯುತ್ತರಕೊಡಲು ನೀವು ಯಾವ ಯೋಚನೆ ಹೇಳುತ್ತೀರಿ ಅಂದನು.

10ಆಗ ಅವನ ಕೂಡ ಬೆಳೆದ ಯೌವನಸ್ಥರು ಅವ ನಿಗೆ--ನಿನ್ನ ತಂದೆಯು ನಮ್ಮ ನೊಗವನ್ನು ಭಾರ ಮಾಡಿದನು; ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು

೨ ಪೂರ್ವಕಾಲವೃತ್ತಾಂತ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी