ನೆಹೆಮಿಯ 9:12

ಇದಲ್ಲದೆ ಹಗಲಿನಲ್ಲಿ ಮೇಘ ಸ್ತಂಭ ದಿಂದಲೂ ಅವರು ನಡೆಯಬೇಕಾದ ಮಾರ್ಗದಲ್ಲಿ ಅವರಿಗೆ ಬೆಳಕಾಗುವ ಹಾಗೆ ರಾತ್ರಿಯಲ್ಲಿ ಅಗ್ನಿ ಸ್ತಂಭ ದಿಂದಲೂ ಅವರನ್ನು ನಡಿಸಿದಿ.

ಸಂದರ್ಭದೊಂದಿಗೆ ಓದಿ · ನೆಹೆಮಿಯ 9

10ಫರೋಹನ ಮೇಲೆಯೂ ಅವನ ಸಮಸ್ತ ಸೇವಕರ ಮೇಲೆಯೂ ಅವನ ಸಮಸ್ತ ದೇಶದ ಜನರ ಮೇಲೆಯೂ ಸೂಚ ಕಕಾರ್ಯಗಳನ್ನೂ ಅದ್ಭುತಗಳನ್ನೂ ತೋರಿಸಿದಿ. ಯಾಕಂದರೆ ಇವರು ಅವರಿಗೆ ಅಹಂಕಾರಿಗಳಾಗಿ ನಡೆದರೆಂದು ತಿಳಿದಿದ್ದಿ. ಈ ಪ್ರಕಾರವೇ ನೀನು ಇಂದಿನ ಹಾಗೆ ನಿನಗೆ ಹೆಸರನ್ನು ಮಾಡಿಕೊಂಡಿದ್ದೀ.

11ನೀನು ಅವರ ಮುಂದೆ ಸಮುದ್ರವನ್ನು ವಿಭಾಗಿಸಿದ್ದರಿಂದ ಅವರು ಸಮುದ್ರದ ಮಧ್ಯದಲ್ಲಿ ಒಣ ಭೂಮಿಯಲ್ಲಿ ಹಾದುಹೋದರು. ಆದರೆ ಅವರನ್ನು ಹಿಂದಟ್ಟಿದವರನ್ನು ಅಗಾಧಗಳಲ್ಲಿ ಕಲ್ಲಿನ ಹಾಗೆ ಮಹಾ ಜಲರಾಶಿಗಳಲ್ಲಿ ದೊಬ್ಬಿ ಬಿಟ್ಟಿ.

12ಇದಲ್ಲದೆ ಹಗಲಿನಲ್ಲಿ ಮೇಘ ಸ್ತಂಭ ದಿಂದಲೂ ಅವರು ನಡೆಯಬೇಕಾದ ಮಾರ್ಗದಲ್ಲಿ ಅವರಿಗೆ ಬೆಳಕಾಗುವ ಹಾಗೆ ರಾತ್ರಿಯಲ್ಲಿ ಅಗ್ನಿ ಸ್ತಂಭ ದಿಂದಲೂ ಅವರನ್ನು ನಡಿಸಿದಿ.

13ಸೀನಾಯ್‌ ಪರ್ವ ತದ ಮೇಲಕ್ಕೆ ಇಳಿದು ಬಂದಿ; ಆಕಾಶದಿಂದ ಅವರ ಸಂಗಡ ಮಾತನಾಡಿದಿ; ಸರಿಯಾದ ನ್ಯಾಯಗಳನ್ನೂ ಸತ್ಯವಾದ ನ್ಯಾಯಪ್ರಮಾಣಗಳನ್ನೂ ಉತ್ತಮವಾದ ಕಟ್ಟಳೆ ಗಳನ್ನೂ ಆಜ್ಞೆಗಳನ್ನೂ ಅವರಿಗೆ ಕೊಟ್ಟಿ.

14ನೀನು ಪರಿಶುದ್ಧ ಸಬ್ಬತ್‌ ದಿವಸವನ್ನು ಅವರಿಗೆ ತಿಳಿಸಿ ನಿನ್ನ ಸೇವಕನಾದ ಮೋಶೆಯ ಮುಖಾಂತರ ಅವರಿಗೆ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ನ್ಯಾಯಪ್ರಮಾಣವನ್ನೂ

ನೆಹೆಮಿಯ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी