ಕರ್ತನ ಒಡಂಬಡಿ ಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ ಇಸ್ರಾಯೇ ಲ್ಯರೆಲ್ಲಾ ಮಹಾ ಆರ್ಭಟವಾಗಿ ಭೂಮಿ ಕಂಪಿಸುವ ಹಾಗೆ ಆರ್ಭಟಿಸಿದರು.
3ಜನರು ಪಾಳೆಯಕ್ಕೆ ಬಂದಾಗ ಇಸ್ರಾಯೇಲಿನ ಹಿರಿಯರು--ಈ ಹೊತ್ತು ಕರ್ತನು ಫಿಲಿಷ್ಟಿಯರ ಮುಂದೆ ನಮ್ಮನ್ನು ಹೊಡೆಸಿ ದ್ದೇನು? ಕರ್ತನ ಒಡಂಬಡಿಕೆಯ ಮಂಜೂಷವು ನಮ್ಮಲ್ಲಿದ್ದು ನಮ್ಮನ್ನು ನಮ್ಮ ಶತ್ರುಗಳಿಂದ ತಪ್ಪಿಸಿ ರಕ್ಷಿಸುವ ಹಾಗೆ ನಾವು ಅದನ್ನು ಶೀಲೋವಿನಿಂದ ತರಿಸೋಣ ಅಂದರು.
4ಹಾಗೆಯೇ ಜನರನ್ನು ಕೆರೂಬಿಗಳ ಮಧ್ಯ ದಲ್ಲಿರುವ ಸೈನ್ಯಗಳ ಕರ್ತನ ಒಡಂಬಡಿಕೆಯ ಮಂಜೂ ಷವನ್ನು ತಕ್ಕೊಂಡು ಬರುವಂತೆ ಶೀಲೋವಿಗೆ ಕಳು ಹಿಸಿದರು. ಅಲ್ಲಿ ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿದ್ದರು;
5ಕರ್ತನ ಒಡಂಬಡಿ ಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ ಇಸ್ರಾಯೇ ಲ್ಯರೆಲ್ಲಾ ಮಹಾ ಆರ್ಭಟವಾಗಿ ಭೂಮಿ ಕಂಪಿಸುವ ಹಾಗೆ ಆರ್ಭಟಿಸಿದರು.
6ಅವರು ಆರ್ಭಟಿಸುವ ಶಬ್ದ ವನ್ನು ಫಿಲಿಷ್ಟಿಯರು ಕೇಳಿದಾಗ--ಇಬ್ರಿಯರ ಪಾಳೆ ಯದ ಈ ಮಹಾ ಆರ್ಭಟವೇನು ಎಂದು ಹೇಳಿ ಕರ್ತನ ಒಡಂಬಡಿಕೆಯ ಮಂಜೂಷವು ಪಾಳೆಯದಲ್ಲಿ ಬಂತೆಂದು ತಿಳುಕೊಂಡರು.
7ಕರ್ತನು ಪಾಳೆಯದಲ್ಲಿ ಬಂದನೆಂದು ಹೇಳಿಕೊಂಡು ಫಿಲಿಷ್ಟಿಯರು ಭಯ ಪಟ್ಟು--ನಮಗೆ ಅಯ್ಯೋ! ಪೂರ್ವದಲ್ಲಿ ಇಂಥದ್ದು ಆಗಿರಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ