ಆದಿಕಾಂಡ 50:11

ದೇಶದ ನಿವಾಸಿಗಳಾದ ಕಾನಾನ್ಯರು ಆಟಾದ್‌ ಕಣದಲ್ಲಿ ಆಗುತ್ತಿದ್ದ ದುಃಖವನ್ನು ನೋಡಿ--ಇದು ಐಗುಪ್ತ್ಯರಿಗೆ ಘೋರವಾದ ದುಃಖ ಎಂದು ಹೇಳಿದರು. ಆದದರಿಂದ ಅದಕ್ಕೆ ಆಬೇಲ್‌ ಮಿಚ್ರಯಾಮ್‌ ಎಂದು ಹೆಸರಾಯಿತು. ಅದು ಯೊರ್ದನಿನ ಆಚೆಯಲ್ಲಿದೆ.

ಸಂದರ್ಭದೊಂದಿಗೆ ಓದಿ · ಆದಿಕಾಂಡ 50

9ರಥಗಳೂ ರಾಹುತರೂ ಅವನ ಸಂಗಡ ಹೊರಟುಹೋದರು.ಆ ಸಮೂಹವು ಬಹಳ ದೊಡ್ಡದಾಗಿತ್ತು.

10ಅವರು ಯೊರ್ದನಿನ ಆಚೆ ಇರುವ ಆಟಾದ್‌ ಕಣಕ್ಕೆ ಬಂದು ಅಲ್ಲಿ ಅಧಿಕವಾದ ಮಹಾಗೋಳಾಟದಿಂದ ದುಃಖ ಪಟ್ಟರು. ಅವನು ತನ್ನ ತಂದೆಗಾಗಿ ಏಳು ದಿವಸಗಳ ವರೆಗೆ ದುಃಖಪಟ್ಟನು.

11ದೇಶದ ನಿವಾಸಿಗಳಾದ ಕಾನಾನ್ಯರು ಆಟಾದ್‌ ಕಣದಲ್ಲಿ ಆಗುತ್ತಿದ್ದ ದುಃಖವನ್ನು ನೋಡಿ--ಇದು ಐಗುಪ್ತ್ಯರಿಗೆ ಘೋರವಾದ ದುಃಖ ಎಂದು ಹೇಳಿದರು. ಆದದರಿಂದ ಅದಕ್ಕೆ ಆಬೇಲ್‌ ಮಿಚ್ರಯಾಮ್‌ ಎಂದು ಹೆಸರಾಯಿತು. ಅದು ಯೊರ್ದನಿನ ಆಚೆಯಲ್ಲಿದೆ.

12ಆಗ ಯಾಕೋಬನು ತನ್ನ ಕುಮಾರರಿಗೆ ಆಜ್ಞಾಪಿಸಿದ ಪ್ರಕಾರ ಅವನಿಗೆ ಮಾಡಿದರು.

13ಅವನ ಕುಮಾರರು ಅವನನ್ನು ಕಾನಾನ್‌ ದೇಶಕ್ಕೆ ತಕ್ಕೊಂಡು ಹೋಗಿ ಅಬ್ರಹಾಮನು ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನಿ ನಿಂದ ಕೊಂಡುಕೊಂಡಿದ್ದ ಮಮ್ರೆಗೆ ಎದುರಾಗಿರುವ ಮಕ್ಪೇಲ ಹೊಲದ ಗವಿಯಲ್ಲಿ ಹೂಣಿಟ್ಟರು.

ಆದಿಕಾಂಡ 50 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी