ಯೆರೆಮಿಯ 16:18

ಆದರೆ ನಾನು ಮೊದಲು ಅವರ ಅಕ್ರಮಕ್ಕೂ ಪಾಪಕ್ಕೂ ಎರಡರಷ್ಟು ಪ್ರತಿಫಲ ಕೊಡು ತ್ತೇನೆ. ಅವರು ನನ್ನ ದೇಶವನ್ನು ತಮ್ಮ ಹೇಸಿಗೆ ಹೆಣ ಗಳಿಂದ ಅಪವಿತ್ರ ಮಾಡಿ ನನ್ನ ಸ್ವಾಸ್ತ್ಯವನ್ನು ತಮ್ಮ ಅಸಹ್ಯಗಳಿಂದ ತುಂಬಿಸಿದ್ದಾರೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 16

16ಇಗೋ, ನಾನು ಅನೇಕ ವಿಾನುಗಾರರನ್ನು ಕಳುಹಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಇವರು ಅವರನ್ನು ಹಿಡಿಯುವರು; ಆಮೇಲೆ ಅನೇಕ ಬೇಟೆ ಗಾರರನ್ನು ಕಳುಹಿಸುವೆನು; ಇವರು ಎಲ್ಲಾ ಬೆಟ್ಟಗುಡ್ಡಗಳ ಮೇಲೆಯೂ ಎಲ್ಲಾ ಗುಡ್ಡಗಳ ಮೇಲೆಯೂ ಎಲ್ಲಾ ಬಂಡೆಗಳ ಬಿರುಕುಗಳಲ್ಲಿಯೂ ಅವರನ್ನು ಬೇಟೆಯಾಡು ವರು.

17ನನ್ನ ಕಣ್ಣುಗಳು ಅವರ ಎಲ್ಲಾ ಮಾರ್ಗಗಳ ಮೇಲೆ ಅವೆ; ಅವು ನನ್ನ ಮುಖಕ್ಕೆ ಮರೆಯಾದವುಗಳಲ್ಲ ಇಲ್ಲವೆ ಅವರ ಅಕ್ರಮವು ನನ್ನ ಕಣ್ಣುಗಳಿಗೆ ಅಡಗಿರು ವದಿಲ್ಲ;

18ಆದರೆ ನಾನು ಮೊದಲು ಅವರ ಅಕ್ರಮಕ್ಕೂ ಪಾಪಕ್ಕೂ ಎರಡರಷ್ಟು ಪ್ರತಿಫಲ ಕೊಡು ತ್ತೇನೆ. ಅವರು ನನ್ನ ದೇಶವನ್ನು ತಮ್ಮ ಹೇಸಿಗೆ ಹೆಣ ಗಳಿಂದ ಅಪವಿತ್ರ ಮಾಡಿ ನನ್ನ ಸ್ವಾಸ್ತ್ಯವನ್ನು ತಮ್ಮ ಅಸಹ್ಯಗಳಿಂದ ತುಂಬಿಸಿದ್ದಾರೆ.

19ಓ ಕರ್ತನೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಅನ್ಯರು ನಿನ್ನ ಬಳಿಗೆ ಬಂದು--ನಿಶ್ಚಯ ವಾಗಿ ನಮ್ಮ ತಂದೆಗಳು ಸುಳ್ಳನ್ನು ವ್ಯರ್ಥವನ್ನು ಲಾಭ ವಿಲ್ಲದವುಗಳನ್ನು ಬಾಧ್ಯವಾಗಿ ಹೊಂದಿದ್ದಾರೆ.

20ಮನು ಷ್ಯನು ದೇವರಲ್ಲದ ದೇವರುಗಳನ್ನು ತನಗೆ ಮಾಡು ವದುಂಟೇ?

ಯೆರೆಮಿಯ 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी