ಎಸ್ತೇರಳು 7:6

ಅದಕ್ಕೆ ಎಸ್ತೇರಳು--ವೈರಿಯೂ ಶತ್ರುವೂ ಯಾರಂದರೆ ಈ ಕೆಟ್ಟವನಾದ ಹಾಮಾನನೇ ಅಂದಳು. ಆಗ ಹಾಮಾನನು ಅರಸನ, ರಾಣಿಯ ಸಮ್ಮುಖದಲ್ಲಿ ಹೆದರಿ ಕೊಂಡನು.

ಸಂದರ್ಭದೊಂದಿಗೆ ಓದಿ · ಎಸ್ತೇರಳು 7

4ಯಾಕಂದರೆ ನಾನೂ ನನ್ನ ಜನವೂ ಸಂಹರಿಸಲ್ಪಡುವದಕ್ಕೂ ಕೊಲ್ಲಲ್ಪ ಡುವದಕ್ಕೂ ನಾಶಮಾಡಲ್ಪಡುವದಕ್ಕೂ ಮಾರಲ್ಪಟ್ಟೆವು. ನಾವು ದಾಸದಾಸಿಗಳಾಗಿ ಮಾರಲ್ಪಟ್ಟಿದ್ದರೆ ನಾನು ಸುಮ್ಮನೆ ಇರುತ್ತಿದ್ದೆನು; ಆದರೆ ವೈರಿ ಅರಸನ ನಷ್ಟಕ್ಕೆ ಸರಿಯಾಗಿ ಕೊಡಲಾರನು ಅಂದಳು.

5ಆಗ ಅರಸ ನಾದ ಅಹಷ್ವೇರೋಷನು--ರಾಣಿಯಾದ ಎಸ್ತೇರಳಿಗೆ ಪ್ರತ್ಯುತ್ತರವಾಗಿ ಈ ಪ್ರಕಾರ ಮಾಡಲು ತನ್ನ ಹೃದಯ ತುಂಬಿಕೊಂಡವನು ಯಾರು? ಅವನು ಎಲ್ಲಿ ಅಂದನು.

6ಅದಕ್ಕೆ ಎಸ್ತೇರಳು--ವೈರಿಯೂ ಶತ್ರುವೂ ಯಾರಂದರೆ ಈ ಕೆಟ್ಟವನಾದ ಹಾಮಾನನೇ ಅಂದಳು. ಆಗ ಹಾಮಾನನು ಅರಸನ, ರಾಣಿಯ ಸಮ್ಮುಖದಲ್ಲಿ ಹೆದರಿ ಕೊಂಡನು.

7ಅರಸನು ಕೋಪವುಳ್ಳವನಾಗಿ ದ್ರಾಕ್ಷಾ ರಸದ ಔತಣದಿಂದ ಎದ್ದು ಅರಮನೆಯ ತೋಟಕ್ಕೆ ಹೋದನು. ಆದರೆ ಹಾಮಾನನು ರಾಣಿಯಾದ ಎಸ್ತೇ ರಳ ಮುಂದೆ ತನ್ನ ಪ್ರಾಣಕ್ಕೋಸ್ಕರ ಬೇಡಿಕೊಳ್ಳುತ್ತಾ ನಿಂತನು, ಯಾಕಂದರೆ ಅರಸನಿಂದ ತನಗೆ ಕೇಡು ನಿರ್ಣಯವಾಯಿತೆಂದು ತಿಳಿದನು.

8ಅರಸನು ಅರ ಮನೆಯ ತೋಟದಿಂದ ದ್ರಾಕ್ಷಾರಸದ ಔತಣ ಸ್ಥಳಕ್ಕೆ ತಿರಿಗಿ ಬಂದಾಗ ಹಾಮಾನನು ಎಸ್ತೇರಳು ಕುಳಿತಿರುವ ಹಾಸಿಗೆಯ ಮೇಲೆ ಬಿದ್ದಿದ್ದನು. ಆಗ ಅರಸನು--ನನ್ನ ಮುಂದೆ ಅವನು ರಾಣಿಯನ್ನು ಬಲಾತ್ಕಾರ ಮಾಡು ವನೋ ಅಂದನು. ಆ ಮಾತು ಅರಸನ ಬಾಯಿಂದ ಹೊರಟಾಗ ಸೇವಕರು ಹಾಮಾನನ ಮುಖವನ್ನು ಮುಚ್ಚಿದರು.

ಎಸ್ತೇರಳು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी