ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು--
1ಪ್ರಿಯರೇ, ನಿಮಗೀಗ ಬರೆಯುವದು ಎರಡನೆಯ ಪತ್ರಿಕೆ. ಈ ಎರಡು ಪತ್ರಿಕೆ ಗಳಲ್ಲಿಯೂ ಜ್ಞಾಪಕಕೊಟ್ಟು ನಿಮ್ಮ ನಿರ್ಮಲವಾದ ಮನಸ್ಸನ್ನು ಪ್ರೇರಿಸಿದ್ದೇನೆ.
2ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ಅಪೊಸ್ತಲರಾದ ನಮ್ಮ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕ ಮಾಡಿಕೊಳ್ಳಬೇಕು.
3ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು--
4ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ಪಿತೃಗಳು ನಿದ್ರೆ ಹೊಂದಿದಂದಿನಿಂದ ಸಮಸ್ತವೂ ಸೃಷ್ಟಿ ಮೊದಲುಗೊಂಡು ಹಾಗೆಯೇ ಇರುತ್ತದಲ್ಲಾ ಎಂದು ಹೇಳುವರೆಂಬದಾಗಿ ನೀವು ಮೊದಲು ತಿಳುಕೊಳ್ಳ ಬೇಕು.
5ಅವರು ಇದನ್ನು ಬೇಕೆಂದು ತಿಳಿಯಲಾರರು; ಅದೇನಂದರೆ ಪೂರ್ವದಲ್ಲಿದ್ದ ಆಕಾಶಗಳೂ ನೀರಿನ ಹೊರಗೆ ಮತ್ತು ನೀರಿನ ಒಳಗೆ ನಿಂತಿರುವ ಭೂಮಿಯೂ ದೇವರ ವಾಕ್ಯದಿಂದ ಉಂಟಾಗಿ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ