ಯೆಹೆಜ್ಕೇಲನು 16:42

ಈ ರೀತಿ ನನ್ನ ಸಿಟ್ಟನ್ನು ನಿನ್ನಲ್ಲಿ ವಿಶ್ರಾಂತಿ ಪಡಿಸುತ್ತೇನೆ, ನನ್ನ ರೋಷವನ್ನು ನಿನ್ನ ಕಡೆಯಿಂದ ತೊಲಗಿಸುತ್ತೇನೆ; ಶಾಂತನಾಗಿ ನಿನ್ನ ಮೇಲೆ ಕೋಪ ಗೊಳ್ಳುವದಿಲ್ಲ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 16

40ಅವರು ನಿನಗೆ ವಿರುದ್ಧವಾಗಿ ಒಂದು ಕೂಟವನ್ನು ಕರಕೊಂಡು ಬಂದು ಕಲ್ಲುಗಳನ್ನು ನಿನ್ನ ಮೇಲೆ ಎಸೆದು, ತಮ್ಮ ಕತ್ತಿಗಳಿಂದ ನಿನ್ನನ್ನು ತಿವಿಯುವರು.

41ಅವರು ನಿನ್ನ ಮನೆಗಳನ್ನು ಸುಟ್ಟು ಬಹಳ ಸ್ತ್ರೀಯರ ಕಣ್ಣುಗಳ ಮುಂದೆ ನಿನಗೆ ನ್ಯಾಯ ತೀರಿಸುವರು; ನೀನು ವ್ಯಭಿಚಾರ ಮಾಡುವದನ್ನು ನಾನು ನಿಲ್ಲಿಸುವೆನು; ಆಗ ನೀನು ಕೂಲಿ ಸಹ ಕೊಡುವದನ್ನು ನಿಲ್ಲಿಸುವೆನು;

42ಈ ರೀತಿ ನನ್ನ ಸಿಟ್ಟನ್ನು ನಿನ್ನಲ್ಲಿ ವಿಶ್ರಾಂತಿ ಪಡಿಸುತ್ತೇನೆ, ನನ್ನ ರೋಷವನ್ನು ನಿನ್ನ ಕಡೆಯಿಂದ ತೊಲಗಿಸುತ್ತೇನೆ; ಶಾಂತನಾಗಿ ನಿನ್ನ ಮೇಲೆ ಕೋಪ ಗೊಳ್ಳುವದಿಲ್ಲ.

43ನೀನು ನಿನ್ನ ಯೌವನ ದಿವಸಗಳನ್ನು ಜ್ಞಾಪಕಮಾಡಿಕೊಳ್ಳದೆ ಈ ಸಂಗತಿಗಳಿಂದ ನೀನು ನನಗೆ ಬೇಸರಪಡಿಸಿದ್ದರಿಂದ ಇಗೋ, ನಾನು ಸಹ ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ. ನಿನ್ನ ಎಲ್ಲಾ ಅಸಹ್ಯವಾದವುಗಳ ಮೇಲೆ ಈ ಅಪವಿತ್ರತೆಯನ್ನು ನೀನು ಮಾಡಬಾರದು.

44ಇಗೋ, ಗಾದೆ ಹೇಳುವವರೆಲ್ಲರೂ--ತಾಯಿಯಂತೆ ಮಗಳು ಎಂಬ ಗಾದೆಯನ್ನು ನಿನಗೆ ವಿರುದ್ಧವಾಗಿ ಹೇಳುವರು.

ಯೆಹೆಜ್ಕೇಲನು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी