ಯೆಶಾಯ 2:2

ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು.

ಸಂದರ್ಭದೊಂದಿಗೆ ಓದಿ · ಯೆಶಾಯ 2

1ಆಮೋಚನ ಮಗನಾದ ಯೆಶಾಯನಿಗೆ ಯೆಹೂದದ ಮತ್ತು ಯೆರೂಸಲೇಮಿನ ವಿಷಯವಾಗಿ ಕಂಡು ಬಂದ ದೈವೋಕ್ತಿ:

2ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು.

3ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು.

4ಆತನು ಅನೇಕ ಜನಾಂಗ ಗಳ ಮಧ್ಯದಲ್ಲಿ ನ್ಯಾಯ ತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವನು; ಅವರು ತಮ್ಮ ಕತ್ತಿಗಳನ್ನು ನೇಗಿಲಿನ ಗುಳಗಳನ್ನಾಗಿಯೂ ತಮ್ಮ ಈಟಿಗಳನ್ನು ಕುಡುಗೋ ಲುಗಳನ್ನಾಗಿಯೂ ಬಡಿಯುವರು; ಜನಾಂಗಕ್ಕೆ ವಿರೋ ಧವಾಗಿ ಜನಾಂಗವು ಕತ್ತಿಯನ್ನು ಎತ್ತದು; ಇಲ್ಲವೆ ಇನ್ನು ಮೇಲೆ ಯುದ್ಧಾಭ್ಯಾಸವು ಇರುವದೇ ಇಲ್ಲ.

ಯೆಶಾಯ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी