೧ ಸಮುವೇಲನು 4:2

ಫಿಲಿಷ್ಟಿ ಯರು ಇಸ್ರಾಯೇಲಿಗೆ ಎದುರಾಗಿ ವ್ಯೂಹವನ್ನು ಕಟ್ಟಿ ಯುದ್ಧ ಮಾಡಿದಾಗ ಇಸ್ರಾಯೇಲ್ಯರು ಫಿಲಿಷ್ಟಿಯರ ಮುಂದೆ ಹೊಡೆಯಲ್ಪಟ್ಟರು. ಹೇಗಂದರೆ, ಫಿಲಿಷ್ಟಿಯರು ಯುದ್ಧರಂಗದಲ್ಲಿ ಹೆಚ್ಚುಕಡಿಮೆ ನಾಲ್ಕು ಸಾವಿರ ಜನರನ್ನು ಕೊಂದುಹಾಕಿದರು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 4

1ಸಮುವೇಲನ ವಾಕ್ಯವು ಸಮಸ್ತ ಇಸ್ರಾಯೇ ಲಿನಲ್ಲಿ ಮುಟ್ಟಿತು. ಆದರೆ ಇಸ್ರಾಯೇ ಲ್ಯರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸವಿಾಪದಲ್ಲಿ ದಂಡಿಳಿದರು. ಫಿಲಿಷ್ಟಿಯರು ಅಫೇಕಿನಲ್ಲಿ ದಂಡಿಳಿದರು.

2ಫಿಲಿಷ್ಟಿ ಯರು ಇಸ್ರಾಯೇಲಿಗೆ ಎದುರಾಗಿ ವ್ಯೂಹವನ್ನು ಕಟ್ಟಿ ಯುದ್ಧ ಮಾಡಿದಾಗ ಇಸ್ರಾಯೇಲ್ಯರು ಫಿಲಿಷ್ಟಿಯರ ಮುಂದೆ ಹೊಡೆಯಲ್ಪಟ್ಟರು. ಹೇಗಂದರೆ, ಫಿಲಿಷ್ಟಿಯರು ಯುದ್ಧರಂಗದಲ್ಲಿ ಹೆಚ್ಚುಕಡಿಮೆ ನಾಲ್ಕು ಸಾವಿರ ಜನರನ್ನು ಕೊಂದುಹಾಕಿದರು.

3ಜನರು ಪಾಳೆಯಕ್ಕೆ ಬಂದಾಗ ಇಸ್ರಾಯೇಲಿನ ಹಿರಿಯರು--ಈ ಹೊತ್ತು ಕರ್ತನು ಫಿಲಿಷ್ಟಿಯರ ಮುಂದೆ ನಮ್ಮನ್ನು ಹೊಡೆಸಿ ದ್ದೇನು? ಕರ್ತನ ಒಡಂಬಡಿಕೆಯ ಮಂಜೂಷವು ನಮ್ಮಲ್ಲಿದ್ದು ನಮ್ಮನ್ನು ನಮ್ಮ ಶತ್ರುಗಳಿಂದ ತಪ್ಪಿಸಿ ರಕ್ಷಿಸುವ ಹಾಗೆ ನಾವು ಅದನ್ನು ಶೀಲೋವಿನಿಂದ ತರಿಸೋಣ ಅಂದರು.

4ಹಾಗೆಯೇ ಜನರನ್ನು ಕೆರೂಬಿಗಳ ಮಧ್ಯ ದಲ್ಲಿರುವ ಸೈನ್ಯಗಳ ಕರ್ತನ ಒಡಂಬಡಿಕೆಯ ಮಂಜೂ ಷವನ್ನು ತಕ್ಕೊಂಡು ಬರುವಂತೆ ಶೀಲೋವಿಗೆ ಕಳು ಹಿಸಿದರು. ಅಲ್ಲಿ ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿದ್ದರು;

೧ ಸಮುವೇಲನು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी