ವಿಮೋಚನಕಾಂಡ 17:8

ತರುವಾಯ ಅಮಾಲೇಕ್ಯರು ಬಂದು ರೆಫೀದೀಮಿ ನಲ್ಲಿ ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದರು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 17

6ಅಲ್ಲಿ ಇಗೋ, ನಾನು ಹೋರೇಬಿನಲ್ಲಿ ಬಂಡೆಯ ಮೇಲೆ ನಿನ್ನ ಮುಂದೆ ನಿಂತುಕೊಳ್ಳುವೆನು ನೀನು ಬಂಡೆಯನ್ನು ಹೊಡೆಯ ಬೇಕು. ಆಗ ಜನರು ಕುಡಿಯುವಂತೆ ನೀರು ಹೊರಗೆ ಬರುವದು ಅಂದನು. ಮೋಶೆಯು ಇಸ್ರಾಯೇಲ್ಯರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.

7ಅವನು ಆ ಸ್ಥಳಕ್ಕೆ ಮಸ್ಸಾ ಮೆರಿಬಾ ಎಂದು ಹೆಸರಿಟ್ಟನು. ಯಾಕಂದರೆ ಅಲ್ಲಿ ಇಸ್ರಾಯೇಲ್‌ ಮಕ್ಕಳು ವಿವಾದ ಮಾಡಿದರು.-- ಕರ್ತನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ ಎಂದು ಪರೀಕ್ಷಿಸಿದರು.

8ತರುವಾಯ ಅಮಾಲೇಕ್ಯರು ಬಂದು ರೆಫೀದೀಮಿ ನಲ್ಲಿ ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದರು.

9ಆಗ ಮೋಶೆಯು ಯೆಹೋಶುವನಿಗೆ--ನೀನು ನಮ ಗಾಗಿ ಮನುಷ್ಯರನ್ನು ಆರಿಸಿಕೊಂಡು ಅಮಾಲೇಕ್ಯರ ಸಂಗಡ ಯುದ್ಧಮಾಡುವದಕ್ಕೆ ಹೊರಟುಹೋಗು; ನಾಳೆ ನಾನು ದೇವರ ಕೋಲನ್ನು ಕೈಯಲ್ಲಿ ಹಿಡಿದು ಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು ಅಂದನು.

10ಮೋಶೆಯು ತನಗೆ ಹೇಳಿದಂತೆ ಯೆಹೋಶುವನು ಅಮಾಲೇಕ್ಯರೊಂದಿಗೆ ಯುದ್ಧಮಾಡಿದನು. ಮೋಶೆ ಯೂ ಆರೋನನೂ ಹೂರನೂ ಗುಡ್ಡದ ಮೇಲೆ ಏರಿಹೋದರು.

ವಿಮೋಚನಕಾಂಡ 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी