ಆದಿಕಾಂಡ 17:22

ಆಗ ದೇವರು ಅವನ ಸಂಗಡ ಮಾತನಾಡುವದನ್ನು ಮುಗಿಸಿ ಅಬ್ರಹಾಮನ ಬಳಿಯಿಂದ ಏರಿಹೋದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 17

20ಇಷ್ಮಾಯೇಲನ ವಿಷಯದಲ್ಲಿ ನೀನು ಬೇಡಿದ್ದನ್ನು ಕೇಳಿದ್ದೇನೆ. ಇಗೋ, ನಾನು ಅವನನ್ನು ಆಶೀರ್ವದಿ ಸಿದೆನು. ಅವನನ್ನು ಅಭಿವೃದ್ಧಿಮಾಡಿ ಅತ್ಯಧಿಕವಾಗಿ ಹೆಚ್ಚಿಸುವೆನು. ಅವನಿಂದ ಹನ್ನೆರಡು ಪ್ರಭುಗಳು ಹುಟ್ಟುವರು. ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು.

21ಆದರೆ ಬರುವ ವರುಷ ಈ ಕಾಲದಲ್ಲಿ ಸಾರಳು ನಿನಗೆ ಹೆರುವ ಇಸಾಕನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು ಎಂದು ಹೇಳಿದನು.

22ಆಗ ದೇವರು ಅವನ ಸಂಗಡ ಮಾತನಾಡುವದನ್ನು ಮುಗಿಸಿ ಅಬ್ರಹಾಮನ ಬಳಿಯಿಂದ ಏರಿಹೋದನು.

23ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲ ನನ್ನೂ ತನ್ನ ಮನೆಯಲ್ಲಿ ಹುಟ್ಟಿದವರೆಲ್ಲರನ್ನೂ ತಾನು ಹಣಕ್ಕೆ ಕೊಂಡುಕೊಂಡವರೆಲ್ಲರನ್ನೂ ಅಬ್ರಹಾಮನ ಮನೆಯಲ್ಲಿದ್ದ ಗಂಡಸರೆಲ್ಲರನ್ನೂ ದೇವರು ತನಗೆ ಹೇಳಿದ ಹಾಗೆ ಆ ದಿನವೇ ಸುನ್ನತಿಮಾಡಿಸುವದಕ್ಕೆ ತಕ್ಕೊಂಡುಹೋದನು.

24ಅಬ್ರಹಾಮನಿಗೆ ಸುನ್ನತಿಯಾದಾಗ ಅವನು ತೊಂಭತ್ತೊಂಭತ್ತು ವರುಷದವನಾಗಿದ್ದನು.

ಆದಿಕಾಂಡ 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी