ಆದಾಗ್ಯೂ ದಾವೀದನು ಚೀಯೋನಿನ ಕೋಟೆಯನ್ನು ಹಿಡುಕೊಂಡನು. ಅದೇ ದಾವೀದನ ಪಟ್ಟಣವು.
5ಅವನು ಹೆಬ್ರೋನಿನಲ್ಲಿ ಯೆಹೂದ ಜನರ ಮೇಲೆ ಏಳುವರೆ ವರುಷ ಆಳಿದನು. ಯೆರೂಸಲೇಮಿನಲ್ಲಿ ಎಲ್ಲಾ ಇಸ್ರಾಯೇಲ್ಯರ ಮೇಲೆಯೂ ಎಲ್ಲಾ ಯೆಹೂ ದದ ಜನರ ಮೇಲೆಯೂ ಮೂವತ್ತುಮೂರು ವರುಷ ಆಳಿದನು.
6ಆಗ ಅರಸನೂ ಅವನ ಜನರೂ ದೇಶದ ನಿವಾಸಿ ಗಳಾದ ಯೆಬೂಸಿಯರು ಒಳಗೆ ಯೆರೂಸಲೇಮಿಗೆ ಬಂದರು. ದಾವೀದನು ಇದರಲ್ಲಿ ಬರಲಾರನೆಂದು ಅವರು ನೆನಸಿ ದಾವೀದನಿಗೆ--ನೀನು ಕುರುಡರನ್ನೂ ಕುಂಟರನ್ನೂ ತೆಗೆದುಹಾಕದ ಹೊರತು ನೀನು ಇಲ್ಲಿಗೆ ಬರಲಾರಿ ಅಂದರು.
7ಆದಾಗ್ಯೂ ದಾವೀದನು ಚೀಯೋನಿನ ಕೋಟೆಯನ್ನು ಹಿಡುಕೊಂಡನು. ಅದೇ ದಾವೀದನ ಪಟ್ಟಣವು.
8ಆ ದಿವಸದಲ್ಲಿ ದಾವೀದನುಕಂದಕವನ್ನು ದಾಟಿ ಯೆಬೂಸಿಯರನ್ನು ಅಂದರೆ ದಾವೀದನ ಪ್ರಾಣ ದ್ವೇಷಿಗಳಾದ ಕುಂಟರನ್ನೂ ಕುರು ಡರನ್ನೂ ಹೊಡೆಯುವವನು (ಮುಖ್ಯಸ್ಥನೂ ಅಧಿ ಪತಿಯೂ ಆಗಿರುವನು) ಎಂದು ಹೇಳಿದ್ದನು. ಅದಕ್ಕೆ ಅವರು--ಕುರುಡರೂ ಕುಂಟರೂ ಮನೆಯೊಳಗೆ ಬರಕೂಡದು ಅಂದರು.
9ದಾವೀದನು ಕೋಟೆಯಲ್ಲಿ ವಾಸಮಾಡಿ ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟನು. ಇದಲ್ಲದೆ ದಾವೀದನು ಮಿಲ್ಲೋವಿನ ಸುತ್ತಲಾಗಿ ಪ್ರಾರಂಭಿಸಿ ಒಳಪಾರ್ಶ್ವದಲ್ಲಿ ಇರುವದನ್ನು ಕಟ್ಟಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ