ಅವನನ್ನು ತನ್ನ ಮನೆಗೆ ಕರಕೊಂಡು ಹೋಗಿ ಕತ್ತೆಗಳಿಗೆ ಮೇವು ಹಾಕಿದನು. ಅವರು ತಮ್ಮ ಕಾಲು ಗಳನ್ನು ತೊಳೆದು ತಿಂದು ಕುಡಿದರು.
19ಆದರೂ ನಮ್ಮ ಕತ್ತೆಗಳಿಗೆ ಮೇವೂ ನನಗೂ ನಿನ್ನ ದಾಸಿಗೂ ನಿನ್ನ ಸೇವಕರ ಸಂಗಡ ಇರುವ ಯೌವನಸ್ಥನಿಗೂ ರೊಟ್ಟಿ ಮತ್ತು ದ್ರಾಕ್ಷಾರಸವು ಉಂಟು; ಏನೂ ಕೊರತೆ ಇಲ್ಲ ಅಂದನು.
20ಆಗ ಆ ಮುದುಕನು ನಿನಗೆ ಸಮಾಧಾನವಾಗಲಿ, ನಿನ್ನ ಕೊರತೆಯೆಲ್ಲಾ ನನ್ನ ಮೇಲೆ ಇರಲಿ; ಹೇಗಾ ದರೂ ಬೀದಿಯೊಳಗೆ ಇಳುಕೊಳ್ಳಬೇಡವೆಂದು ಹೇಳಿ
21ಅವನನ್ನು ತನ್ನ ಮನೆಗೆ ಕರಕೊಂಡು ಹೋಗಿ ಕತ್ತೆಗಳಿಗೆ ಮೇವು ಹಾಕಿದನು. ಅವರು ತಮ್ಮ ಕಾಲು ಗಳನ್ನು ತೊಳೆದು ತಿಂದು ಕುಡಿದರು.
22ಅವರು ತಮ್ಮ ಹೃದಯವನ್ನು ಸಂತೋಷ ಪಡಿಸಿ ಕೊಳ್ಳುತ್ತಿರುವ ವೇಳೆಯಲ್ಲಿ ಇಗೋ, ಆ ಪಟ್ಟಣದ ಮನುಷ್ಯರಲ್ಲಿ ಬೆಲಿಯಾಳನ ಕೆಲವು ಕುಮಾರರು ಆ ಮನೆಯನ್ನು ಸುತ್ತಿಕೊಂಡು ಕದವನ್ನು ಬಡಿದು ಆ ಮನೆಯ ಯಜಮಾನನಾದ ಮುದುಕನಿಗೆ--ನಿನ್ನ ಮನೆಯಲ್ಲಿ ಬಂದ ಆ ಮನುಷ್ಯನನ್ನು ನಾವು ತಿಳು ಕೊಳ್ಳುವ ಹಾಗೆ, ಅವನನ್ನು ಹೊರಗೆ ತಾ ಎಂದು ಹೇಳಿದರು.
23ಆಗ ಮನೆಯ ಯಜಮಾನನಾದ ಆ ಮನುಷ್ಯನು ಅವರ ಬಳಿಗೆ ಹೊರಟುಹೋಗಿ ಅವರಿಗೆ--ಹಾಗೆ ಮಾಡಬೇಡಿರಿ; ನನ್ನ ಸಹೋದರರೇ, ದಯಮಾಡಿ ಕೆಟ್ಟತನಮಾಡಬೇಡಿರಿ; ಆ ಮನುಷ್ಯನು ನನ್ನ ಮನೆಯಲ್ಲಿ ಪ್ರವೇಶಿಸಿದ್ದರಿಂದ ನೀವು ಅಂಥಾಬುದ್ಧಿಹೀನತೆಯನ್ನು ಮಾಡಬೇಡಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ