ಯಾಜಕಕಾಂಡ 25:34

ಆದರೆ ಅವರ ಪಟ್ಟಣಗಳಿಗೆ ಸೇರಿರುವ ಉಪ ನಗರಗಳ ಹೊಲವನ್ನು ಮಾರಬಾರದು. ಅದು ಅವರಿಗೆ ನಿತ್ಯವಾದ ಸ್ವಾಸ್ತ್ಯವೇ.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 25

32ಇದಲ್ಲದೆ ಲೇವಿಯರ ಪಟ್ಟಣಗಳ ವಿಷಯವಾ ಗಿಯೂ ಅವರ ಸ್ವಾಸ್ತ್ಯವಾಗಿರುವ ಪಟ್ಟಣಗಳಲ್ಲಿನ ಮನೆಗಳ ವಿಷಯವಾಗಿಯೂ ಲೇವಿಯರು ಯಾವ ಸಮಯದಲ್ಲಿಯಾದರೂ ಬಿಡಿಸಿಕೊಳ್ಳಬಹುದು.

33ಲೇವಿಯರಿಂದ ಏನಾದರೂ ಕೊಂಡುಕೊಂಡರೆ ಕೊಂಡುಕೊಂಡ ಮನೆಯೂ ಅವನ ಸ್ವಾಸ್ತ್ಯದ ಪಟ್ಟಣವೂ ಸಂಭ್ರಮದ ವರುಷದಲ್ಲಿ ಬಿಡುಗಡೆಯಾಗ ಬೇಕು; ಲೇವಿಯರ ಪಟ್ಟಣಗಳ ಮನೆಗಳು ಇಸ್ರಾ ಯೇಲ್‌ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವಾಗಿವೆ.

34ಆದರೆ ಅವರ ಪಟ್ಟಣಗಳಿಗೆ ಸೇರಿರುವ ಉಪ ನಗರಗಳ ಹೊಲವನ್ನು ಮಾರಬಾರದು. ಅದು ಅವರಿಗೆ ನಿತ್ಯವಾದ ಸ್ವಾಸ್ತ್ಯವೇ.

35ನಿನ್ನ ಸಹೋದರನು ಬಡವನಾಗಿ ನಿನ್ನ ಬಳಿಯಲ್ಲಿ ಕ್ಷೀಣನಾಗಿ ಬಿದ್ದುಕೊಂಡಿದ್ದರೆ ಅವನು ಪರಕೀಯ ನಾಗಿದ್ದರೂ ಪ್ರವಾಸಿಯಾಗಿದ್ದರೂ ಅವನು ನಿನ್ನ ಬಳಿ ಯಲ್ಲಿ ಬದುಕುವ ಹಾಗೆ ಅವನಿಗೆ ಸಹಾಯಮಾಡ ಬೇಕು.

36ನೀನು ಅವನಿಂದ ಬಡ್ಡಿಯನ್ನಾಗಲಿ ಇಲ್ಲವೆ ಲಾಭವನ್ನಾಗಲಿ ತೆಗೆದುಕೊಳ್ಳಬಾರದು. ಆದರೆ ನಿನ್ನ ಸಹೋದರನು ನಿನ್ನೊಂದಿಗೆ ಬದುಕುವಂತೆ ನಿನ್ನ ದೇವ ರಿಗೆ ಭಯಪಡು.

ಯಾಜಕಕಾಂಡ 25 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी