ಆದಿಕಾಂಡ 32:18

ನೀನು ಅವನಿಗೆ--ಅವು ನಿನ್ನ ದಾಸನಾದ ಯಾಕೋಬನವುಗಳೇ; ಇದು ನನ್ನ ಯಜಮಾನನಾದ ಏಸಾವನಿಗೆ ಕಳುಹಿಸಲ್ಪಟ್ಟ ಕಾಣಿಕೆ; ಇಗೋ, ಅವನೂ ನಮ್ಮ ಹಿಂದೆ ಇದ್ದಾನೆ ಎಂದು ಅವನಿಗೆ ಹೇಳಬೇಕೆಂದು ಆಜ್ಞಾಪಿಸಿದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 32

16ಇವುಗಳಲ್ಲಿ ಪ್ರತಿಯೊಂದು ಮಂದೆಯನ್ನು ಪ್ರತ್ಯೇಕವಾಗಿ ಅವನು ತನ್ನ ಸೇವಕರಿಗೆ ಒಪ್ಪಿಸಿ ಅವರಿಗೆ--ನನ್ನ ಮುಂದೆ ನಡೆದು ಮಂದೆ ಮಂದೆಗೂ ಮಧ್ಯದಲ್ಲಿ ಸ್ಥಳಬಿಡಿರಿ ಅಂದನು.

17ಅವನು ಮೊದಲನೆಯವನಿಗೆ--ನನ್ನ ಸಹೋದರನಾದ ಏಸಾವನು ನಿನ್ನೆದುರಿಗೆ ಬಂದು-- ನೀನು ಯಾರವನು? ಎಲ್ಲಿಗೆ ಹೋಗುತ್ತೀ? ಇಲ್ಲಿ ನಿನ್ನ ಮುಂದೆ ಇರುವವುಗಳು ಯಾರವು ಎಂದು ಕೇಳಿದರೆ

18ನೀನು ಅವನಿಗೆ--ಅವು ನಿನ್ನ ದಾಸನಾದ ಯಾಕೋಬನವುಗಳೇ; ಇದು ನನ್ನ ಯಜಮಾನನಾದ ಏಸಾವನಿಗೆ ಕಳುಹಿಸಲ್ಪಟ್ಟ ಕಾಣಿಕೆ; ಇಗೋ, ಅವನೂ ನಮ್ಮ ಹಿಂದೆ ಇದ್ದಾನೆ ಎಂದು ಅವನಿಗೆ ಹೇಳಬೇಕೆಂದು ಆಜ್ಞಾಪಿಸಿದನು.

19ಎರಡನೆಯ ವನಿಗೂ ಮೂರನೆಯವನಿಗೂ ಮಂದೆಗಳ ಹಿಂದೆ ಹೋಗುವವರೆಲ್ಲರಿಗೂನೀವು ಏಸಾವನನ್ನು ಕಂಡರೆ ಅವನಿಗೆ ಹಾಗೆಯೇ ಹೇಳಬೇಕು.

20ಇದಲ್ಲದೆ--ನಿನ್ನ ದಾಸನಾದ ಯಾಕೋಬನು ನಮ್ಮ ಹಿಂದೆ ಬರುತ್ತಾನೆಂದು ಹೇಳಬೇಕು ಎಂದು ಆಜ್ಞಾಪಿಸಿದನು. ಯಾಕಂದರೆ ನನ್ನ ಮುಂದೆ ಹೋಗುವ ಕಾಣಿಕೆಯಿಂದ ಅವನನ್ನು ಸಮಾಧಾನಪಡಿಸುವೆನು. ತರುವಾಯ ಅವನ ಮುಖವನ್ನು ನೋಡುವೆನು; ಅವನು ನನ್ನನ್ನು ಅಂಗೀಕರಿಸುವನೇನೋ ಎಂದು ಅಂದು ಕೊಂಡನು.

ಆದಿಕಾಂಡ 32 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी