ಯೆರೆಮಿಯ 5:5

ನಾನು ದೊಡ್ಡವರ ಬಳಿಗೆ ಹೋಗಿ ಅವರ ಸಂಗಡ ಮಾತನಾಡು ವೆನು; ಅವರು ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ತಿಳಿದಿದ್ದಾರೆ; ಆದರೆ ಇವರು ಕೂಡ ನೊಗವನ್ನು ಮುರಿದು ಬಂಧನಗಳನ್ನು ಹರಿದು ಬಿಟ್ಟಿದ್ದಾರೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 5

3ಓ ಕರ್ತನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇವೆಯ ಲ್ಲವೋ? ಅವರನ್ನು ಹೊಡೆದಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ಸಂಹರಿಸಿದಿ, ಆದರೆ ಶಿಕ್ಷೆ ಹೊಂದಲೊಲ್ಲದೆ ಇದ್ದರು; ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ; ಅವರು ಹಿಂತಿರುಗುವದಕ್ಕೆ ನಿರಾಕರಿಸಿದ್ದಾರೆ.

4ಆದದರಿಂದ ನಾನು--ನಿಶ್ಚಯವಾಗಿ ಇವರು ಬಡವರು, ಬುದ್ಧಿ ಹೀನರು; ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ಅರಿಯರು.

5ನಾನು ದೊಡ್ಡವರ ಬಳಿಗೆ ಹೋಗಿ ಅವರ ಸಂಗಡ ಮಾತನಾಡು ವೆನು; ಅವರು ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ತಿಳಿದಿದ್ದಾರೆ; ಆದರೆ ಇವರು ಕೂಡ ನೊಗವನ್ನು ಮುರಿದು ಬಂಧನಗಳನ್ನು ಹರಿದು ಬಿಟ್ಟಿದ್ದಾರೆ.

6ಹೀಗಿರುವದರಿಂದ ಅಡವಿಯ ಸಿಂಹವು ಅವರನ್ನು ಕೊಲ್ಲುವದು; ಸಂಜೆಯ ತೋಳವು ಅವರನ್ನು ಸೂರೆ ಮಾಡುವದು; ಚಿರತೆ ಅವರ ಪಟ್ಟಣಗಳ ಮೇಲೆ ಕಾವಲಾಗಿರುವದು; ಅಲ್ಲಿಂದ ಹೊರಗೆ ಬರುವವ ರೆಲ್ಲರೂ ಸೀಳಲ್ಪಡುವರು; ಅವರ ದ್ರೋಹಗಳು ಬಹಳವಾಗಿವೆ; ಅವರ ಹಿಂತಿರುಗುವಿಕೆಯು ಹೆಚ್ಚಾಗಿದೆ.

7ಇದಕ್ಕಾಗಿ ನಾನು ನಿನ್ನನ್ನು ಹೇಗೆ ಮನ್ನಿಸಲಿ? ನಿನ್ನ ಮಕ್ಕಳು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆ ಇಟ್ಟುಕೊಂಡಿದ್ದಾರೆ; ನಾನು ಅವರನ್ನು ತೃಪ್ತಿಪಡಿ ಸಿದ ಮೇಲೆ ಅವರು ವ್ಯಭಿಚಾರಮಾಡಿ ಸೂಳೆಯರ ಮನೆಗಳಲ್ಲಿ ಗುಂಪಾಗಿ ಕೂಡಿಕೊಂಡರು.

ಯೆರೆಮಿಯ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी