ಧರ್ಮೋಪದೇಶಕಾಂಡ 31:17

ಆ ದಿವಸದಲ್ಲಿ ನನ್ನ ಕೋಪವು ಅವರ ಮೇಲೆ ಉರಿಯು ವದು. ನಾನು ಅವರನ್ನು ಬಿಟ್ಟುಬಿಟ್ಟು ನನ್ನ ಮುಖವನ್ನು ಅವರಿಗೆ ಮರೆಮಾಡುವೆನು; (ವಿರೋಧಿಗಳು) ಅವ ರನ್ನು ನುಂಗಿ ಬಿಡುವರು; ಬಹಳ ಕೇಡುಗಳೂ ಇಕ್ಕಟ್ಟು ಗಳೂ ಅವರಿಗೆ ಸಂಭವಿಸುವವು; ಆ ದಿವಸದಲ್ಲಿ ಅವರು--ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ಈ ಕೇಡುಗಳು ನಮ್ಮನ್ನು ಹಿಡಿದವಲ್ಲಾ ಎಂದು ಹೇಳುವರು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 31

15ಆಗ ಕರ್ತನು ಗುಡಾರದೊಳಗೆ ಮೇಘಸ್ತಂಭದಲ್ಲಿ ಕಾಣಿಸಿ ಕೊಂಡನು; ಆ ಮೇಘಸ್ತಂಭವು ಗುಡಾರದ ಬಾಗಲಿನ ಮೇಲೆ ನಿಂತಿತು.

16ಆಗ ಕರ್ತನು ಮೋಶೆಗೆ--ನೀನು ನಿನ್ನ ಪಿತೃಗಳ ಸಂಗಡ ಮಲಗುವಿ; ಈ ಜನರು ಎದ್ದು ತಾವು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಜಾರತ್ವಮಾಡಿ ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ವಿಾರುವರು.

17ಆ ದಿವಸದಲ್ಲಿ ನನ್ನ ಕೋಪವು ಅವರ ಮೇಲೆ ಉರಿಯು ವದು. ನಾನು ಅವರನ್ನು ಬಿಟ್ಟುಬಿಟ್ಟು ನನ್ನ ಮುಖವನ್ನು ಅವರಿಗೆ ಮರೆಮಾಡುವೆನು; (ವಿರೋಧಿಗಳು) ಅವ ರನ್ನು ನುಂಗಿ ಬಿಡುವರು; ಬಹಳ ಕೇಡುಗಳೂ ಇಕ್ಕಟ್ಟು ಗಳೂ ಅವರಿಗೆ ಸಂಭವಿಸುವವು; ಆ ದಿವಸದಲ್ಲಿ ಅವರು--ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ಈ ಕೇಡುಗಳು ನಮ್ಮನ್ನು ಹಿಡಿದವಲ್ಲಾ ಎಂದು ಹೇಳುವರು.

18ಅವರು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತವೂ ಅನ್ಯದೇವರುಗಳ ಕಡೆಗೆ ತಿರುಗಿದ್ದರಿಂದಲೂ ನಾನು ಆ ದಿವಸದಲ್ಲಿ ನನ್ನ ಮುಖವನ್ನು ಖಂಡಿತವಾಗಿ ಮರೆಮಾಡುವೆನು.

19ಹೀಗಿರುವದರಿಂದ ಈಗ ಈ ಹಾಡನ್ನು ಬರೆದು ಕೊಳ್ಳಿರಿ; ಇಸ್ರಾಯೇಲ್‌ ಮಕ್ಕಳಿಗೆ ಅದನ್ನು ಕಲಿಸು; ಇಸ್ರಾಯೇಲ್‌ ಮಕ್ಕಳಲ್ಲಿ ಈ ಹಾಡು ನನಗೆ ಸಾಕ್ಷಿಯಾ ಗಿರುವ ಹಾಗೆ ಅದನ್ನು ಅವರ ಬಾಯಿಗಳಲ್ಲಿ ಇಡು.

ಧರ್ಮೋಪದೇಶಕಾಂಡ 31 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी