೧ ಕೊರಿಂಥದವರಿಗೆ 1:18

ನಾಶವಾಗುವವರಿಗೆ ಶಿಲುಬೆಯ ವಿಷಯವಾದ ಸಾರೋಣವು ಹುಚ್ಚುತನವಾಗಿದೆ; ರಕ್ಷಣೆ ಹೊಂದಿದ ನಮಗಾದರೋ ಅದು ದೇವರ ಶಕ್ತಿಯಾಗಿದೆ.

ಸಂದರ್ಭದೊಂದಿಗೆ ಓದಿ · ೧ ಕೊರಿಂಥದವರಿಗೆ 1

16ನಾನು ಸ್ತೆಫನನ ಮನೆಯವರಿಗೆ ಸಹ ಬಾಪ್ತಿಸ್ಮ ಮಾಡಿಸಿದೆನು. ಇವರಿಗಲ್ಲದೆ ಇನ್ನಾರಿಗೂ ನಾನು ಬಾಪ್ತಿಸ್ಮ ಮಾಡಿಸಿದಂತೆ ಕಾಣೆನು.

17ಬಾಪ್ತಿಸ್ಮ ಮಾಡಿಸುವದಕ್ಕಲ್ಲ, ಸುವಾರ್ತೆಯನ್ನು ಸಾರುವದಕ್ಕೆ ಕ್ರಿಸ್ತನು ನನ್ನನ್ನು ಕಳುಹಿಸಿದನು. ವಾಕ್ಚಾತುರ್ಯದಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯು ನಿರರ್ಥಕವಾಗುವದು.

18ನಾಶವಾಗುವವರಿಗೆ ಶಿಲುಬೆಯ ವಿಷಯವಾದ ಸಾರೋಣವು ಹುಚ್ಚುತನವಾಗಿದೆ; ರಕ್ಷಣೆ ಹೊಂದಿದ ನಮಗಾದರೋ ಅದು ದೇವರ ಶಕ್ತಿಯಾಗಿದೆ.

19ನಾನು ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು; ವಿವೇಕಿಗಳ ವಿವೇಕವನ್ನು ಇಲ್ಲದಂತಾಗ ಮಾಡುವೆನು ಎಂದು ಬರೆಯಲ್ಪಟ್ಟಿದೆ.

20ಜ್ಞಾನಿಯು ಎಲ್ಲಿ? ಶಾಸ್ತ್ರಿಯು ಎಲ್ಲಿ? ಲೋಕದ ತರ್ಕವಾದಿ ಎಲ್ಲಿ? ದೇವರು ಈ ಲೋಕದ ಜ್ಞಾನವನ್ನು ಹುಚ್ಚುತನವನ್ನಾಗಿ ಮಾಡಿದ್ದಾನಲ್ಲವೇ?

೧ ಕೊರಿಂಥದವರಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी