ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈಗ ನೀವು ನಂಬುತ್ತೀರೋ?
29ಆತನ ಶಿಷ್ಯರು ಆತನಿಗೆ--ಇಗೋ, ಈಗ ನೀನು ಸಾಮ್ಯರೂಪದಲ್ಲಿ ಮಾತನಾಡದೆ ಸ್ಪಷ್ಟವಾಗಿಯೇ ಮಾತನಾಡುತ್ತೀ.
30ನೀನು ಎಲ್ಲಾ ವಿಷಯಗಳನ್ನು ತಿಳಿದಾತನೆಂದೂ ಯಾವ ಮನುಷ್ಯನು ನಿನ್ನನ್ನು ಕೇಳು ವದು ಅಗತ್ಯವಿಲ್ಲವೆಂದೂ ಈಗ ನಮಗೆ ನಿಶ್ಚಯ ವಾಯಿತು; ಇದರಿಂದ ನೀನು ದೇವರ ಕಡೆಯಿಂದ ಹೊರಟು ಬಂದಿದ್ದೀ ಎಂದು ನಾವು ನಂಬುತ್ತೇವೆ ಅಂದರು.
31ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈಗ ನೀವು ನಂಬುತ್ತೀರೋ?
32ಇಗೋ, ಒಬ್ಬೊಬ್ಬನು ತನ್ನ ತನ್ನ ಸ್ಥಳಕ್ಕೆ ಚದರಿ ಹೋಗಿ ನನ್ನನ್ನು ಒಂಟಿಗನಾಗಿ ಬಿಡುವ ಗಳಿಗೆ ಬರುವದು. ಹೌದು, ಈಗಲೇ ಬಂದಿದೆ. ಆದಾಗ್ಯೂ ನಾನು ಒಂಟಿಗನಲ್ಲ; ತಂದೆಯು ನನ್ನ ಸಂಗಡ ಇದ್ದಾನೆ.
33ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ