ಆದಿಕಾಂಡ 37:28

ಈ ಪ್ರಕಾರ (ಮಿದ್ಯಾನ್ಯರ ವರ್ತಕರು ಹಾದುಹೋಗುತ್ತಿದ್ದಾಗ) ಅವರು ಯೋಸೇಫನನ್ನು ತಗ್ಗಿನಿಂದ ಮೇಲೆತ್ತಿ ಇಷ್ಮಾಯೇಲ್ಯ ರಿಗೆ ಅವನನ್ನು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು, ಅವರು ಯೋಸೇಫನನ್ನು ಐಗುಪ್ತಕ್ಕೆ ಕರಕೊಂಡು ಹೋದರು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 37

26ಆಗ ಯೆಹೂದನು ತನ್ನ ಸಹೋದರರಿಗೆ--ನಾವು ನಮ್ಮ ಸಹೋದರನನ್ನು ಕೊಂದುಹಾಕಿ ಅವನ ರಕ್ತವನ್ನು ಮರೆಮಾಡುವದರಲ್ಲಿ ಲಾಭವೇನು?

27ಬನ್ನಿರಿ, ಇಷ್ಮಾಯೇಲ್ಯರಿಗೆ ಅವನನ್ನು ಮಾರೋಣ. ನಾವು ಅವನ ಮೇಲೆ ಕೈಹಾಕಬಾರದು. ಯಾಕಂದರೆ ಅವನು ನಮ್ಮ ಸಹೋದರನೂ ನಮ್ಮ ಮಾಂಸವೂ ಆಗಿದ್ದಾನೆ ಅಂದನು. ಅದಕ್ಕೆ ಅವನ ಸಹೋದರರು ಒಪ್ಪಿದರು.

28ಈ ಪ್ರಕಾರ (ಮಿದ್ಯಾನ್ಯರ ವರ್ತಕರು ಹಾದುಹೋಗುತ್ತಿದ್ದಾಗ) ಅವರು ಯೋಸೇಫನನ್ನು ತಗ್ಗಿನಿಂದ ಮೇಲೆತ್ತಿ ಇಷ್ಮಾಯೇಲ್ಯ ರಿಗೆ ಅವನನ್ನು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು, ಅವರು ಯೋಸೇಫನನ್ನು ಐಗುಪ್ತಕ್ಕೆ ಕರಕೊಂಡು ಹೋದರು.

29ರೂಬೇನನು ತಗ್ಗಿನ ಬಳಿಗೆ ತಿರಿಗಿ ಬಂದಾಗ ಇಗೋ, ಯೋಸೇಫನು ತಗ್ಗಿನಲ್ಲಿ ಇಲ್ಲದ್ದರಿಂದ ತನ್ನ ವಸ್ತ್ರಗಳನ್ನು ಹರಿದು ಕೊಂಡನು.

30ಅವನು ತನ್ನ ಸಹೋದರರ ಬಳಿಗೆ ತಿರಿಗಿಹೋಗಿ--ಆ ಮಗುವು ಇಲ್ಲವಲ್ಲಾ; ಹಾಗಾದರೆ ನಾನು ಎಲ್ಲಿಗೆ ಹೋಗಲಿ ಅಂದನು.

ಆದಿಕಾಂಡ 37 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी