೨ ಪೂರ್ವಕಾಲವೃತ್ತಾಂತ 30:9

ನೀವು ಕರ್ತನ ಕಡೆಗೆ ತಿರುಗಿದರೆ ನಿಮ್ಮ ಸಹೋದ ರರೂ ನಿಮ್ಮ ಮಕ್ಕಳೂ ತಿರಿಗಿ ಈ ದೇಶಕ್ಕೆ ಬರುವ ಹಾಗೆ ತಮ್ಮನ್ನು ಸೆರೆಯಾಗಿ ಒಯ್ದವರ ಸಮ್ಮುಖದಲ್ಲಿ ಕರುಣೆಯನ್ನು ಹೊಂದುವರು. ನಿಮ್ಮ ದೇವರಾದ ಕರ್ತನು ಕೃಪೆಯೂ ಕರುಣೆಯೂ ಉಳ್ಳವನಾಗಿದ್ದಾನೆ, ನೀವು ಆತನ ಕಡೆಗೆ ತಿರುಗಿದರೆ ಆತನು ನಿಮ್ಮ ಕಡೆ ಯಿಂದ ತನ್ನ ಮುಖ ತೊಲಗಿಸನು ಎಂದು ಹೇಳಿದರು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 30

7ತಮ್ಮ ಪಿತೃಗಳ ದೇವರಾದ ಕರ್ತನಿಗೆ ಅಪರಾಧ ಮಾಡಿದಂಥ, ನೀವು ನೋಡುವ ಹಾಗೆ ನಾಶನಕ್ಕೆ ಒಪ್ಪಿಸಲ್ಪಟ್ಟಂಥ, ನಿಮ್ಮ ಪಿತೃಗಳ ಹಾಗೆಯೂ ನಿಮ್ಮ ಸಹೋದರರ ಹಾಗೆಯೂ ಇರಬೇಡಿರಿ.

8ನಿಮ್ಮ ಪಿತೃ ಗಳ ಹಾಗೆ ನಿಮ್ಮ ಕುತ್ತಿಗೆಯನ್ನು ಕಠಿಣಪಡಿಸಬೇಡಿರಿ. ಕರ್ತನಿಗೆ ಕೈಕೊಟ್ಟು ಆತನು ಯುಗಯುಗಕ್ಕೂ ಪರಿಶುದ್ಧ ಮಾಡಿದ ಆತನ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಕರ್ತನನ್ನು ಸೇವಿಸಿರಿ. ಆಗ ತನ್ನ ಉಗ್ರಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವನು.

9ನೀವು ಕರ್ತನ ಕಡೆಗೆ ತಿರುಗಿದರೆ ನಿಮ್ಮ ಸಹೋದ ರರೂ ನಿಮ್ಮ ಮಕ್ಕಳೂ ತಿರಿಗಿ ಈ ದೇಶಕ್ಕೆ ಬರುವ ಹಾಗೆ ತಮ್ಮನ್ನು ಸೆರೆಯಾಗಿ ಒಯ್ದವರ ಸಮ್ಮುಖದಲ್ಲಿ ಕರುಣೆಯನ್ನು ಹೊಂದುವರು. ನಿಮ್ಮ ದೇವರಾದ ಕರ್ತನು ಕೃಪೆಯೂ ಕರುಣೆಯೂ ಉಳ್ಳವನಾಗಿದ್ದಾನೆ, ನೀವು ಆತನ ಕಡೆಗೆ ತಿರುಗಿದರೆ ಆತನು ನಿಮ್ಮ ಕಡೆ ಯಿಂದ ತನ್ನ ಮುಖ ತೊಲಗಿಸನು ಎಂದು ಹೇಳಿದರು.

10ಹೀಗೆಯೇ ದೂತರು ಎಫ್ರಾಯಾಮಿನ, ಮನ ಸ್ಸೆಯ ದೇಶದಲ್ಲಿ ಜೆಬುಲೂನ್‌ ಪರ್ಯಂತರ ಸಂಚರಿಸಿ ಪಟ್ಟಣದಿಂದ ಪಟ್ಟಣಕ್ಕೆ ಹಾದುಹೋದರು. ಆದರೆ ಜನರು ಇವರನ್ನು ನೋಡಿ ನಕ್ಕು ಗೇಲಿ ಮಾಡಿದರು.

11ಆದಾಗ್ಯೂ ಅಶೇರ, ಮನಸ್ಸೆ, ಜೆಬುಲೂನ್‌ ಇವರಲ್ಲಿ ಕೆಲವರು ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು.

೨ ಪೂರ್ವಕಾಲವೃತ್ತಾಂತ 30 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी