ಹೋಶೇ 2:4

ಅವಳ ಮಕ್ಕಳನ್ನು ಸಹ ಕರುಣಿಸುವದಿಲ್ಲ; ಅವರು ಸೂಳೆತನದಿಂದಾದ ಮಕ್ಕಳೇ,

ಸಂದರ್ಭದೊಂದಿಗೆ ಓದಿ · ಹೋಶೇ 2

2ನಿಮ್ಮ ತಾಯಿಯ ಸಂಗಡ ವಾದಿಸಿರಿ, ವಾದಿಸಿರಿ; ಅವಳು ನನ್ನ ಹೆಂಡತಿಯಲ್ಲ; ಇಲ್ಲವೆ ನಾನು ಅವಳ ಗಂಡನಲ್ಲ; ಆದದರಿಂದ ಅವಳು ತನ್ನ ದೃಷ್ಟಿಯಿಂದ ತನ್ನ ವ್ಯಭಿಚಾರತ್ವಗಳನ್ನು ತನ್ನ ಸ್ತನಗಳ ಮಧ್ಯದಿಂದ ತನ್ನ ವ್ಯಭಿಚಾರಗಳನ್ನು ತೊಲಗಿಸಲಿ.

3ಇಲ್ಲದಿದ್ದರೆ ನಾನು ಅವಳನ್ನು ಬೆತ್ತಲೆಯಾಗಿ ಮಾಡಿ ಅವಳು ಹುಟ್ಟಿದ ದಿನದಲ್ಲಾದ ಹಾಗೆ ನಿಲ್ಲಿಸಿ ಅವಳನ್ನು ಅರಣ್ಯ ದಂತೆ ಮಾಡುವೆನು. ಅವಳನ್ನು ಒಣಗಿದ ಭೂಮಿ ಯಂತೆ ಇಟ್ಟು ದಾಹದಿಂದ ಅವಳನ್ನು ಕೊಲ್ಲುತ್ತೇನೆ.

4ಅವಳ ಮಕ್ಕಳನ್ನು ಸಹ ಕರುಣಿಸುವದಿಲ್ಲ; ಅವರು ಸೂಳೆತನದಿಂದಾದ ಮಕ್ಕಳೇ,

5ಅವರ ತಾಯಿ ಸೂಳೆ ತನ ಮಾಡಿದ್ದಾಳೆ; ಅವರನ್ನು ಹೆತ್ತವಳು ನಾಚಿಕೆಯಿ ಲ್ಲದೆ ನಡೆದಿದ್ದಾಳೆ; ಯಾಕಂದರೆ ಅವಳು--ನನ್ನ ರೊಟ್ಟಿ ಯನ್ನೂ ನನ್ನ ನೀರನ್ನೂ ನನ್ನ ಉಣ್ಣೆನಾರು ಗಳನ್ನೂ ನನ್ನ ತೈಲವನ್ನೂ ಪಾನವನ್ನೂ ನನಗೆ ಕೊಡುವ ನನ್ನ ಪ್ರಿಯರ ಹಿಂದೆ ಹೋಗುತ್ತೇನೆಂದು ಅಂದುಕೊಂಡಿದ್ದಾಳೆ.

6ಆದದರಿಂದ ಇಗೋ, ನಾನು ನಿನ್ನ ಮಾರ್ಗಕ್ಕೆ ಮುಳ್ಳುಗಳ ಬೇಲಿ ಹಾಕುವೆನು; ಅವಳು ತನ್ನ ಹಾದಿಗಳನ್ನು ಕಾಣದ ಹಾಗೆ ಗೋಡೆಯನ್ನು ಕಟ್ಟುವೆನು.

ಹೋಶೇ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी