೧ ಪೂರ್ವಕಾಲವೃತ್ತಾಂತ 19:4

ಆದದರಿಂದ ಹಾನೂ ನನು ದಾವೀದನ ಸೇವಕರನ್ನು ಹಿಡಿದು ಅವರನ್ನು ಬೋಳಿಸಿ ಅವರ ಅಂಗಿಗಳನ್ನು ಮಧ್ಯದಲ್ಲಿ ಸೊಂಟದ ಕೆಳಗಿನ ವರೆಗೂ ಕತ್ತರಿಸಿ ಅವರನ್ನು ಕಳುಹಿಸಿಬಿಟ್ಟನು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 19

2ಆಗ ದಾವೀದನು--ಹಾನೂನನ ತಂದೆಯಾದ ನಾಹಾಷನು ನನಗೆ ಕೃಪೆ ತೋರಿಸಿದ್ದರಿಂದ ಅವನ ಮಗನಾದ ಹಾನೂನನಿಗೆ ನಾನು ಕೃಪೆ ತೋರಿಸುವೆನು ಅಂದನು. ದಾವೀದನು ಅವನ ತಂದೆಯನ್ನು ಕುರಿತು ಅವನಿಗೆ ಆದರಣೆ ಕೊಡಲು ಸೇವಕರನ್ನು ಕಳುಹಿ ಸಿದನು. ಹೀಗೆಯೇ ದಾವೀದನ ಸೇವಕರು ಅವನಿಗೆ ಆದರಣೆ ಕೊಡಲು ಅಮ್ಮೋನನ ಮಕ್ಕಳ ದೇಶಕ್ಕೆ ಹಾನೂನನ ಬಳಿಗೆ ಬಂದರು.

3ಆದರೆ ಅಮ್ಮೋನಿಯರ ಪ್ರಧಾನರು ಹಾನೂನನಿಗೆ--ದಾವೀದನು ನಿನ್ನ ಬಳಿಗೆ ಆದರಣೆ ಕೊಡುವವರನ್ನು ಕಳುಹಿಸಿದ್ದರಿಂದ ನಿನ್ನ ತಂದೆಯನ್ನು ಘನಪಡಿಸುತ್ತಾನೆಂದು ನೀನು ನೆನಸು ತ್ತಿಯೋ? ಅವನ ಸೇವಕರು ಶೋಧಿಸಲೂ ಕೆಡವಿ ಹಾಕಲೂ ದೇಶವನ್ನು ಪಾಳತಿ ನೋಡಲೂ ನಿನ್ನ ಬಳಿಗೆ ಬರಲಿಲ್ಲವೋ ಅಂದರು.

4ಆದದರಿಂದ ಹಾನೂ ನನು ದಾವೀದನ ಸೇವಕರನ್ನು ಹಿಡಿದು ಅವರನ್ನು ಬೋಳಿಸಿ ಅವರ ಅಂಗಿಗಳನ್ನು ಮಧ್ಯದಲ್ಲಿ ಸೊಂಟದ ಕೆಳಗಿನ ವರೆಗೂ ಕತ್ತರಿಸಿ ಅವರನ್ನು ಕಳುಹಿಸಿಬಿಟ್ಟನು.

5ಆಗ ಕೆಲವರು ಹೋಗಿ ಈ ಮನುಷ್ಯರನ್ನು ಕುರಿತು ದಾವೀದನಿಗೆ ತಿಳಿಸಿದರು. ಆ ಮನುಷ್ಯರು ಬಹಳವಾಗಿ ನಾಚಿಕೆಪಟ್ಟದ್ದರಿಂದ ಅವರನ್ನು ಎದುರುಗೊಳ್ಳಲು ಸೇವ ಕರನ್ನು ಕಳುಹಿಸಿ ಅರಸನು ಅವರಿಗೆ--ನಿಮ್ಮ ಗಡ್ಡಗಳು ಬೆಳೆಯುವ ವರೆಗೂ ಯೆರಿಕೋವಿನಲ್ಲಿ ಇರ್ರಿ; ಆಮೇಲೆ ತಿರಿಗಿ ಬನ್ನಿರಿ ಎಂದು ಹೇಳಿದನು.

6ಅಮ್ಮೋನಿಯರು, ತಾವು ದಾವೀದನಿಗೆ ಅಸಹ್ಯರಾ ದೆವೆಂದು ಕಂಡಾಗ ಹಾನೂನನೂ ಅಮ್ಮೋನಿಯರೂ ಅರಾಮಿನಲ್ಲಿಯೂ ಅರಾಮ್‌ ಮಾಕದಲ್ಲಿಯೂ ಚೋಬಾದಲ್ಲಿಯೂ ರಥಗಳನ್ನೂ ರಾಹುತರನ್ನೂ ಕೂಲಿಗೆ ತೆಗೆದುಕೊಳ್ಳಲು ಸಾವಿರ ಬೆಳ್ಳಿ ತಲಾಂತುಗಳನ್ನು ಕಳುಹಿಸಿದರು.

೧ ಪೂರ್ವಕಾಲವೃತ್ತಾಂತ 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी