ವಿಮೋಚನಕಾಂಡ 18:16

ಅವರಿಗೆ ವ್ಯಾಜ್ಯವಿದ್ದರೆ ನನ್ನ ಬಳಿಗೆ ಬರುತ್ತಾರೆ. ನಾನು ಒಬ್ಬರ ಸಂಗಡ ಇನ್ನೊಬ್ಬರಿಗಿರುವ ವ್ಯಾಜ್ಯವನ್ನು ತೀರಿಸುತ್ತೇನೆ. ದೇವರ ನಿಯಮಗಳನ್ನೂ ಆತನ ನ್ಯಾಯ ಪ್ರಮಾಣಗಳನ್ನೂ ಅವರಿಗೆ ತಿಳಿಯಪಡಿಸುತ್ತೇನೆ ಅಂದನು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 18

14ಮೋಶೆಯು ಜನರಿಗೆ ಮಾಡುವದನ್ನೆಲ್ಲಾ ಮೋಶೆಯ ಮಾವನು ನೋಡಿ ಮೋಶೆಗೆ--ಇದೇನು ಜನರಿಗೆ ನೀನು ಮಾಡುವದು? ಯಾಕೆ ನೀನೊಬ್ಬನೇ ಕೂತಿರಲಾಗಿ ಜನರು ಬೆಳಗಿನಿಂದ ಸಾಯಂಕಾಲದ ವರೆಗೆ ನಿನ್ನ ಬಳಿಯಲ್ಲಿ ನಿಂತಿದ್ದಾರೆ ಅಂದನು.

15ಅದಕ್ಕೆ ಮೋಶೆಯು ತನ್ನ ಮಾವನಿಗೆ--ದೇವರ ವಿಷಯದಲ್ಲಿ ಕೇಳುವದಕ್ಕಾಗಿ ಜನರು ನನ್ನ ಬಳಿಗೆ ಬರುತ್ತಾರೆ.

16ಅವರಿಗೆ ವ್ಯಾಜ್ಯವಿದ್ದರೆ ನನ್ನ ಬಳಿಗೆ ಬರುತ್ತಾರೆ. ನಾನು ಒಬ್ಬರ ಸಂಗಡ ಇನ್ನೊಬ್ಬರಿಗಿರುವ ವ್ಯಾಜ್ಯವನ್ನು ತೀರಿಸುತ್ತೇನೆ. ದೇವರ ನಿಯಮಗಳನ್ನೂ ಆತನ ನ್ಯಾಯ ಪ್ರಮಾಣಗಳನ್ನೂ ಅವರಿಗೆ ತಿಳಿಯಪಡಿಸುತ್ತೇನೆ ಅಂದನು.

17ಮೋಶೆಯ ಮಾವನು ಅವನಿಗೆ--ನೀನು ಮಾಡುವ ಈ ಕಾರ್ಯವು ಸರಿಯಲ್ಲ;

18ನೀನೂ ನಿನ್ನ ಸಂಗಡ ಇರುವ ಜನರೂ ಖಂಡಿತ ಬಳಲುವಿರಿ, ಯಾಕಂದರೆ ಇದು ನಿನಗೆ ಬಹು ಭಾರ; ನೀನು ಸ್ವತಃ ಇದನ್ನು ಮಾಡಲಾರಿ.

ವಿಮೋಚನಕಾಂಡ 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी