ಯೇಸು ಅವರಿಗೆ ಆಜ್ಞಾಪಿಸಿದಂತೆ ಶಿಷ್ಯರು ಪಸ್ಕವನ್ನು ಸಿದ್ಧಪಡಿಸಿದರು.
17ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು--ಪಸ್ಕದ ಊಟಮಾಡುವದಕ್ಕೆ ನಾವು ನಿನಗಾಗಿ ಎಲ್ಲಿ ಸಿದ್ಧಮಾಡಬೇಕೆಂದು ನೀನು ಕೋರುತ್ತೀ ಎಂದು ಆತನನ್ನು ಕೇಳಿದರು.
18ಅದಕ್ಕೆ ಆತನು--ನೀವು ಪಟ್ಟಣದೊಳಕ್ಕೆ ಇಂಥವನ ಬಳಿಗೆ ಹೋಗಿ-- ನನ್ನ ಸಮಯವು ಸವಿಾಪವಾಗಿದೆ; ನನ್ನ ಶಿಷ್ಯರ ಜೊತೆಗೆ ನಿನ್ನ ಮನೆಯಲ್ಲಿ ಪಸ್ಕವನ್ನು ಆಚರಿಸುತ್ತೇನೆಂದು ಬೋಧಕನು ಹೇಳುತ್ತಾನೆ ಎಂಬದಾಗಿ ಅವನಿಗೆ ಹೇಳಿರಿ ಅಂದನು.
19ಯೇಸು ಅವರಿಗೆ ಆಜ್ಞಾಪಿಸಿದಂತೆ ಶಿಷ್ಯರು ಪಸ್ಕವನ್ನು ಸಿದ್ಧಪಡಿಸಿದರು.
20ಸಾಯಂಕಾಲ ವಾದಾಗ ಆತನು ಹನ್ನೆರಡು ಮಂದಿ ಶಿಷ್ಯರೊಂದಿಗೆ ಊಟಕ್ಕೆ ಕೂತುಕೊಂಡನು;
21ಅವರು ಊಟಮಾಡು ತ್ತಿದ್ದಾಗ ಆತನು--ನಾನು ನಿಮಗೆ ನಿಜವಾಗಿ ಹೇಳು ತ್ತೇನೆ, ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ