೧ ಕೊರಿಂಥದವರಿಗೆ 14:6

ಹೀಗಿರುವದರಿಂದ ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ಪ್ರಕಟ ವಾದದ್ದರಿಂದಾಗಲಿ ಇಲ್ಲವೆ ಜ್ಞಾನದಿಂದಾಗಲಿ ಇಲ್ಲವೆ ಪ್ರವಾದನೆಯಿಂದಾಗಲಿ ಇಲ್ಲವೆ ಬೋಧನೆಯಿಂದಾ ಗಲಿ ಮಾತನಾಡದೆ ಭಾಷೆಗಳಿಂದ ಮಾತ್ರ ಮಾತನಾಡಿ ದರೆ ನನ್ನಿಂದ ನಿಮಗೇನು ಪ್ರಯೋಜನ?

ಸಂದರ್ಭದೊಂದಿಗೆ ಓದಿ · ೧ ಕೊರಿಂಥದವರಿಗೆ 14

4ಭಾಷೆಯನ್ನಾಡುವವನು ತನಗೆ ಮಾತ್ರ ಭಕ್ತಿವೃದ್ಧಿಯನ್ನುಂಟು ಮಾಡಿಕೊಳ್ಳುತ್ತಾನೆ. ಪ್ರವಾದಿಸು ವವನಾದರೋ ಸಭೆಗೆ ಭಕ್ತಿವೃದ್ಧಿಯನ್ನುಂಟು ಮಾಡು ತ್ತಾನೆ.

5ನೀವೆಲ್ಲರೂ ಭಾಷೆಗಳನ್ನಾಡಬೇಕೆಂದು ನಾನು ಅಪೇಕ್ಷಿಸುತ್ತೇನೆ; ಆದರೆ ಅದಕ್ಕಿಂತಲೂ ನೀವು ಪ್ರವಾದಿಸಬೇಕೆಂಬದೇ ನನ್ನಿಷ್ಟ. ಭಾಷೆಗಳನ್ನಾಡು ವವನು ಸಭೆಗೆ ಭಕ್ತಿವೃದ್ಧಿಯಾಗುವದಕ್ಕಾಗಿ ಆ ಭಾಷೆಯ ಅರ್ಥವನ್ನು ಹೇಳದೆ ಹೋದರೆ ಅವನಿಗಿಂತ ಪ್ರವಾದಿಸುವವನು ಶ್ರೇಷ್ಠ.

6ಹೀಗಿರುವದರಿಂದ ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ಪ್ರಕಟ ವಾದದ್ದರಿಂದಾಗಲಿ ಇಲ್ಲವೆ ಜ್ಞಾನದಿಂದಾಗಲಿ ಇಲ್ಲವೆ ಪ್ರವಾದನೆಯಿಂದಾಗಲಿ ಇಲ್ಲವೆ ಬೋಧನೆಯಿಂದಾ ಗಲಿ ಮಾತನಾಡದೆ ಭಾಷೆಗಳಿಂದ ಮಾತ್ರ ಮಾತನಾಡಿ ದರೆ ನನ್ನಿಂದ ನಿಮಗೇನು ಪ್ರಯೋಜನ?

7ಕೊಳಲು ವೀಣೆ ಮೊದಲಾದ ಅಚೇತನವಾದ್ಯಗಳು ಸ್ವರಗಳಲಿ ಯಾವ ಭೇದವನ್ನೂ ತೋರಿಸದಿದ್ದರೆ ಊದಿದ್ದು ಅಥವಾ ಬಾರಿಸಿದ್ದು ತಿಳಿಯುವದು ಹೇಗೆ?

8ತುತೂರಿಯು ಗೊತ್ತಿಲ್ಲದ ಶಬ್ದವನ್ನು ಕೊಟ್ಟರೆ ತನ್ನನ್ನು ಯುದ್ಧಕ್ಕೆ ಸಿದ್ಧಮಾಡಿಕೊಳ್ಳುವವನು ಯಾರು?

೧ ಕೊರಿಂಥದವರಿಗೆ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी