ವಿಮೋಚನಕಾಂಡ 28:42

ಅವರ ಬೆತ್ತಲೆಯನ್ನು ಮುಚ್ಚುವ ಹಾಗೆ ನಾರಿನ ಇಜಾರುಗಳನ್ನು ಮಾಡಿಸು. ಅವು ಸೊಂಟದಿಂದ ತೊಡೆಯ ವರೆಗೆ ಇರಬೇಕು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 28

40ಆರೋನನ ಕುಮಾರರಿಗೆ ಅಂಗಿಗಳನ್ನು ನಡುಕ ಟ್ಟುಗಳನ್ನು ಮಾಡಿಸಿ ಅವರಿಗೆ ಗೌರವಾರ್ಥವಾಗಿಯೂ ಅಂದಕ್ಕಾಗಿಯೂ ಕುಲಾಯಿಗಳನ್ನೂ ಮಾಡಿಸಬೇಕು.

41ಅವುಗಳನ್ನು ನಿನ್ನ ಸಹೋದರನಾದ ಆರೋನ ನಿಗೂ ಅವನ ಕುಮಾರರಿಗೂ ತೊಡಿಸಿ ಅವರನ್ನು ಅಭಿಷೇಕಿಸಿ ಪ್ರತಿಷ್ಠೆಮಾಡು. ಅವರು ನನಗೆ ಯಾಜಕ ಸೇವೆಮಾಡುವ ಹಾಗೆ ಅವರನ್ನು ಶುದ್ಧಮಾಡು.

42ಅವರ ಬೆತ್ತಲೆಯನ್ನು ಮುಚ್ಚುವ ಹಾಗೆ ನಾರಿನ ಇಜಾರುಗಳನ್ನು ಮಾಡಿಸು. ಅವು ಸೊಂಟದಿಂದ ತೊಡೆಯ ವರೆಗೆ ಇರಬೇಕು.

43ಆರೋನನೂ ಅವನ ಕುಮಾರರೂ ಸಭೆಯ ಗುಡಾರಕ್ಕೆ ಹೋಗುವಾಗಲೂ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವದಕ್ಕೆ ಯಜ್ಞವೇದಿಯ ಸವಿಾಪಕ್ಕೆ ಬರುವಾಗಲೂ ತಮ್ಮ ಅಕ್ರಮವನ್ನು ಹೊತ್ತು ಸಾಯದ ಹಾಗೆ ಇವುಗಳನ್ನು ಹಾಕಿಕೊಂಡಿರಬೇಕು. ಇದೇ ಅವನಿಗೂ ಅವನ ತರುವಾಯ ಅವನ ಸಂತತಿಯ ವರಿಗೂ ಇರಬೇಕಾದ ನಿತ್ಯವಾದ ಕಟ್ಟಳೆ.

ವಿಮೋಚನಕಾಂಡ 28 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी