೧ ಪೂರ್ವಕಾಲವೃತ್ತಾಂತ 29:17

ನನ್ನ ಕರ್ತನೇ, ನೀನು ಹೃದಯವನ್ನು ಶೋಧಿಸಿ ಯಥಾರ್ಥವಾದವು ಗಳಲ್ಲಿ ಸಂತೋಷವಾಗಿದ್ದೀ ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಮನಃಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿ ರುವ ನಿನ್ನ ಜನರು ನಿನಗೆ ಮನಃಪೂರ್ವಕವಾಗಿ ಅರ್ಪಿ ಸುವದನ್ನು ಈಗ ಸಂತೋಷವಾಗಿ ಕಂಡೆನು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 29

15ನಾವು ನಿನ್ನ ಸಮ್ಮುಖದಲ್ಲಿ ನಮ್ಮ ಸಮಸ್ತ ಪಿತೃಗಳ ಹಾಗೆ ಪರದೇಶಸ್ಥರೂ ಪ್ರವಾಸಿಗಳೂ ಆಗಿದ್ದೇವೆ. ಭೂಮಿಯ ಮೇಲೆ ನಮ್ಮ ದಿವಸಗಳು ನೆರಳಿನ ಹಾಗೆ ಅವೆ; ನೆಲೆಯು ಇಲ್ಲ.

16ನಮ್ಮ ದೇವರಾದ ಕರ್ತನೇ, ನಿನ್ನ ಪರಿಶುದ್ಧ ನಾಮಕ್ಕೋಸ್ಕರ ನಿನಗೆ ಮನೆಯನ್ನು ಕಟ್ಟಿಸಲು ನಾವು ಸಿದ್ಧಮಾಡಿದ ಈ ರಾಶಿಯೆಲ್ಲಾ ನಿನ್ನಿಂದ ಬಂದದ್ದು; ಸಮಸ್ತವೂ ನಿನ್ನದು.

17ನನ್ನ ಕರ್ತನೇ, ನೀನು ಹೃದಯವನ್ನು ಶೋಧಿಸಿ ಯಥಾರ್ಥವಾದವು ಗಳಲ್ಲಿ ಸಂತೋಷವಾಗಿದ್ದೀ ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಮನಃಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿ ರುವ ನಿನ್ನ ಜನರು ನಿನಗೆ ಮನಃಪೂರ್ವಕವಾಗಿ ಅರ್ಪಿ ಸುವದನ್ನು ಈಗ ಸಂತೋಷವಾಗಿ ಕಂಡೆನು.

18ನಮ್ಮ ಪಿತೃಗಳಾದ ಅಬ್ರಹಾಕಮ್‌, ಇಸಾಕ್‌, ಇಸ್ರಾಯೇ ಲಿನ ದೇವರಾದ ಕರ್ತನೇ, ಇದನ್ನು ನಿನ್ನ ಜನರ ಹೃದಯದ ಯೋಚನೆಗಳ ಭಾವನೆಯಲ್ಲಿ ನಿರಂತರ ವಾಗಿ ಕಾಪಾಡಿ ಅವರ ಹೃದಯವನ್ನು ನಿನಗೆ ಸಿದ್ಧ ಮಾಡು.

19ಇದಲ್ಲದೆ ನಿನ್ನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನು ಕೈಕೊಳ್ಳಲೂ ಸಮಸ್ತವನ್ನು ಮಾಡಲೂ ನಾನು ಯಾವದಕ್ಕೋಸ್ಕರ ಸಿದ್ಧಮಾಡಿದೆನೋ ಆ ಅರಮನೆಯನ್ನು ಕಟ್ಟಿಸಲೂ ನನ್ನ ಮಗನಾದ ಸೊಲೊ ಮೋನನಿಗೆ ಪೂರ್ಣ ಹೃದಯವನ್ನು ಕೊಡು ಅಂದನು.

೧ ಪೂರ್ವಕಾಲವೃತ್ತಾಂತ 29 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी