ವಿಮೋಚನಕಾಂಡ 8:23

ನನ್ನ ಜನರನ್ನೂ ನಿನ್ನ ಜನರನ್ನೂ ವಿಂಗಡಿಸುವೆನು. ನಾಳೆ ಈ ಗುರುತು ಇರುವದು ಎಂದು ಹೇಳು ಅಂದನು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 8

21ನೀನು ನನ್ನ ಜನರನ್ನು ಕಳುಹಿಸದೆ ಹೋದರೆ ಇಗೋ, ನಾನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ನಿನ್ನ ಮನೆಗಳಲ್ಲಿಯೂ ನೊಣಗಳನ್ನು ಕಳುಹಿಸುವೆನು. ಐಗುಪ್ತ್ಯರ ಮನೆಗಳೂ ಅವರು ವಾಸವಾಗಿರುವ ಭೂಮಿಯೂ ನೊಣಗಳಿಂದ ತುಂಬಿರುವವು.

22ಆದರೆ ಆ ದಿವಸದಲ್ಲಿ ನಾನೇ ಭೂಲೋಕದಲ್ಲಿ ಕರ್ತನೆಂದು ನೀನು ತಿಳಿದುಕೊಳ್ಳುವಂತೆ ನನ್ನ ಜನರು ವಾಸಿಸುವ ಗೋಷೆನ್‌ ಸೀಮೆಯಲ್ಲಿ ನೊಣಗಳು ಇರದ ಹಾಗೆ ಅದನ್ನು ನಾನು ಪ್ರತ್ಯೇಕಿಸುವೆನು.

23ನನ್ನ ಜನರನ್ನೂ ನಿನ್ನ ಜನರನ್ನೂ ವಿಂಗಡಿಸುವೆನು. ನಾಳೆ ಈ ಗುರುತು ಇರುವದು ಎಂದು ಹೇಳು ಅಂದನು.

24ಕರ್ತನು ಹಾಗೆಯೇ ಮಾಡಿದನು; ಬಾಧಿಸುವ ನೊಣಗಳು ಫರೋಹನ ಮನೆಯಲ್ಲಿಯೂ ಅವನ ಸೇವಕರ ಮನೆಗಳಲ್ಲಿಯೂ ಸಮಸ್ತ ಐಗುಪ್ತದೇಶ ದಲ್ಲಿಯೂ ತುಂಬಿಕೊಂಡವು; ಅವುಗಳಿಂದ ದೇಶವು ಕೆಟ್ಟುಹೋಯಿತು.

25ಆಗ ಫರೋಹನು ಮೋಶೆ ಆರೋನರನ್ನು ಕರೆ ಯಿಸಿ ಅವರಿಗೆ--ನೀವು ಹೋಗಿ ದೇಶದಲ್ಲಿಯೇ ನಿಮ್ಮ ದೇವರಿಗೆ ಯಜ್ಞವನ್ನರ್ಪಿಸಿರಿ ಅಂದನು.

ವಿಮೋಚನಕಾಂಡ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी