ಯಾಜಕಕಾಂಡ 14:12

ಆಗ ಯಾಜಕನು ಒಂದು ಗಂಡು ಕುರಿಮರಿಯನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಂಡು ಅಪರಾಧ ಬಲಿಗಾಗಿ ಸಮರ್ಪಿಸಿ ಅವುಗಳನ್ನು ಆಡಿಸುವ ಸಮರ್ಪಣೆಗಾಗಿ ಕರ್ತನ ಎದುರಿನಲ್ಲಿ ಆಡಿಸಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 14

10ಎಂಟನೆಯ ದಿವಸದಲ್ಲಿ ಅವನು ದೋಷವಿಲ್ಲದ ಎರಡು ಕುರಿಮರಿ ಗಳನ್ನು ಒಂದು ವರುಷದ ದೋಷವಿಲ್ಲದ ಹೆಣ್ಣು ಕುರಿಯನ್ನು ಆಹಾರ ಸಮರ್ಪಣೆಗಾಗಿ ಹತ್ತರಲ್ಲಿ ಮೂರರಷ್ಟು ಎಣ್ಣೆ ಬೆರೆಸಿದ ನಯವಾದ ಹಿಟ್ಟನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು.

11ಅವನನ್ನು ಶುದ್ಧಪಡಿಸುವ ಯಾಜಕನು ಶುದ್ಧ ಪಡಿಸಿಕೊಳ್ಳುವವನನ್ನೂ ಆ ವಸ್ತುಗಳನ್ನೂ ಸಭೆಯ ಗುಡಾರದ ಬಾಗಿಲಿನ ಬಳಿಯಲ್ಲಿ ಕರ್ತನ ಮುಂದೆ ನಿಲ್ಲಿಸಬೇಕು.

12ಆಗ ಯಾಜಕನು ಒಂದು ಗಂಡು ಕುರಿಮರಿಯನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಂಡು ಅಪರಾಧ ಬಲಿಗಾಗಿ ಸಮರ್ಪಿಸಿ ಅವುಗಳನ್ನು ಆಡಿಸುವ ಸಮರ್ಪಣೆಗಾಗಿ ಕರ್ತನ ಎದುರಿನಲ್ಲಿ ಆಡಿಸಬೇಕು.

13ಇದಲ್ಲದೆ ಅವನು ಆ ಕುರಿಮರಿಯನ್ನು ಪರಿಶುದ್ಧ ಸ್ಥಳದಲ್ಲಿ ಪಾಪಬಲಿಯನ್ನೂ ದಹನಬಲಿಯನ್ನೂ ವಧಿಸುವ ಸ್ಥಳದಲ್ಲಿ ವಧಿಸಬೇಕು; ಯಾಕಂದರೆ ಪಾಪಬಲಿಯಂತೆಯೇ ಅಪರಾಧ ಬಲಿಯೂ ಯಾಜಕನದಾಗಿದೆ, ಅದು ಅತಿ ಪರಿಶುದ್ಧವಾದದ್ದು.

14ಯಾಜಕನು ಅಪರಾಧ ಬಲಿ ಯಲ್ಲಿ ಸ್ವಲ್ಪ ರಕ್ತವನ್ನು ತೆಗೆದುಕೊಳ್ಳಬೇಕು ಅದನ್ನು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೆ ಹಚ್ಚಬೇಕು.

ಯಾಜಕಕಾಂಡ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी