ಯೆರೆಮಿಯ 49:15

ಇಗೋ, ನಿನ್ನನ್ನು ಅನ್ಯಜನಾಂಗ ಗಳಲ್ಲಿ ಹೀನವಾಗಿಯೂ ಮನುಷ್ಯರಲ್ಲಿ ತಿರಸ್ಕರಿಸಲ್ಪಟ್ಟವ ನನ್ನಾಗಿಯೂ ಮಾಡುವೆನು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 49

13ಬೊಚ್ರವು ಹಾಳೂ ನಿಂದೆಯೂ ಅಡವಿಯೂ ಶಾಪವೂ ಆಗುವದೆಂದು ಅದರ ಪಟ್ಟಣಗಳೆಲ್ಲಾ ಎಂದೆಂದಿಗೂ ಅಡವಿ ಸ್ಥಳಗಳಾ ಗುವವೆಂದೂ ನನ್ನ ಮೇಲೆ ಪ್ರಮಾಣ ಮಾಡಿಕೊಂಡಿದ್ದೇನೆಂದು ಕರ್ತನು ಅನ್ನುತ್ತಾನೆ.

14ಕರ್ತನಿಂದ ನಾನು ಸುದ್ದಿಯನ್ನು ಕೇಳಿದ್ದೇನೆ; ಅನ್ಯಜನಾಂಗಗಳೊಳಗೆ ರಾಯಭಾರಿಯು ಕಳುಹಿಸಲ್ಪಟ್ಟಿದ್ದಾನೆ; ನೀವು ಒಟ್ಟು ಗೂಡಿಕೊಂಡು ಅದಕ್ಕೆ ವಿರೋಧವಾಗಿ ಬನ್ನಿರಿ, ಯುದ್ಧಕ್ಕಾಗಿ ಏಳಿರಿ.

15ಇಗೋ, ನಿನ್ನನ್ನು ಅನ್ಯಜನಾಂಗ ಗಳಲ್ಲಿ ಹೀನವಾಗಿಯೂ ಮನುಷ್ಯರಲ್ಲಿ ತಿರಸ್ಕರಿಸಲ್ಪಟ್ಟವ ನನ್ನಾಗಿಯೂ ಮಾಡುವೆನು.

16ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ ಗುಡ್ಡದ ಕೊನೆಯನ್ನು ಹಿಡಿಯುವವನೇ, ನಿನ್ನ ಭಯಂಕರತ್ವವೂ ಹೃದಯದ ಗರ್ವವೂ ನಿನ್ನನ್ನು ಮೋಸಗೊಳಿಸಿದವು; ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಮಾಡಿದರೂ ಅಲ್ಲಿಂದ ನಿನ್ನನ್ನು ಇಳಿಸುತ್ತೇನೆಂದು ಕರ್ತನು ಅನ್ನುತ್ತಾನೆ.

17ಎದೋಮು ಸಹ ಹಾಳಾಗುವದು; ಅದರ ಬಳಿಯಲ್ಲಿ ಹಾದು ಹೋಗುವವರೆಲ್ಲರೂ ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು.

ಯೆರೆಮಿಯ 49 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी