೧ ಅರಸುಗಳು 19:17

ಯೇಹುವಿನ ಕತ್ತಿಗೆ ತಪ್ಪಿದವನನ್ನು ಎಲೀಷನು ಕೊಂದುಹಾಕುವನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 19

15ಆಗ ಕರ್ತನು ಅವನಿಗೆ--ನೀನು ಹೋಗಿ ನಿನ್ನ ಮಾರ್ಗದಲ್ಲಿ ದಮಸ್ಕದ ಅರಣ್ಯಕ್ಕೆ ತಿರಿಗಿಕೊಂಡು ಒಳಗೆ ಹೋಗಿ ಹಜಾಯೇಲನನ್ನು ಅರಾಮಿನ ಮೇಲೆ ಅರಸನಾಗಿರಲು ಅಭಿಷೇಕಿಸು. ಇದಲ್ಲದೆ ನಿಂಷಿಯನ ಮಗನಾದ ಯೇಹುವನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕಿಸಿ, ಅಬೇಲ್‌ಮೆಹೋಲ ಊರಿನವನಾದ ಶಾಫಾಟನ ಮಗನಾಗಿರುವ ಎಲೀಷ ನನ್ನು ನಿನಗೆ ಬದಲಾಗಿ ಪ್ರವಾದಿಯಾಗಿರಲು ಅಭಿ ಷೇಕಿಸು.

16ಹಜಾಯೇಲನ ಕತ್ತಿಗೆ ತಪ್ಪಿದವನನ್ನು ಯೇಹುವ ಕೊಂದುಹಾಕುವನು;

17ಯೇಹುವಿನ ಕತ್ತಿಗೆ ತಪ್ಪಿದವನನ್ನು ಎಲೀಷನು ಕೊಂದುಹಾಕುವನು.

18ಆದರೆ ಬಾಳನಿಗೆ ಬೊಗ್ಗದೆ ಇರುವ ಸಕಲ ಮೊಣ ಕಾಲುಗಳೂ ಅದನ್ನು ಮುದ್ದಿಡದ ಸಕಲ ಬಾಯಿಗಳೂ ಆಗಿರುವ ಏಳು ಸಾವಿರ ಮಂದಿಯನ್ನು ಇಸ್ರಾಯೇ ಲಿನಲ್ಲಿ ನನಗೋಸ್ಕರ ಉಳಿಸಿಕೊಂಡಿದ್ದೇನೆ ಅಂದನು.

19ಹಾಗೆಯೇ ಅವನು ಅಲ್ಲಿಂದ ಹೊರಟು ಶಾಫಾ ಟನ ಮಗನಾದ ಎಲೀಷನನ್ನು ಕಂಡುಕೊಂಡನು; ಅವನು ತನ್ನ ಮುಂದೆ ಇರುವ ಹನ್ನೆರಡು ಜೋಡು ಎತ್ತುಗಳಿಂದ ಉಳುತ್ತಿದ್ದನು; ಅವನು ಹನ್ನೆರಡನೇ ಜೋಡಿನ ಸಂಗಡ ಇದ್ದನು. ಎಲೀಯನು ಅವನ ಪಕ್ಕದಲ್ಲಿ ಹಾದು ಹೋಗಿ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.

೧ ಅರಸುಗಳು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी