ಆಗ ಕರ್ತನು ಹೊರಟು ಯುದ್ಧದ ದಿನದಲ್ಲಿ ಕಾದಾಟಮಾಡಿದ ಪ್ರಕಾರವೇ ಆ ಜನಾಂಗಗಳ ಸಂಗಡ ಆತನು ಕಾದಾಟ ಮಾಡುವನು.
1ಇಗೋ, ಕರ್ತನ ದಿನವು ಬರುತ್ತದೆ.
2ಆಗ ನಿನ್ನ ಕೊಳ್ಳೆಯು ನಿನ್ನ ಮಧ್ಯದಲ್ಲಿ ವಿಭಾಗಿಸ ಲ್ಪಡುವದು; ನಾನು ಜನಾಂಗಗಳನ್ನೆಲ್ಲಾ ಯೆರೂಸ ಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು; ಪಟ್ಟಣವು ಹಿಡಿಯಲ್ಪಡುವದು; ಮನೆಗಳು ಸುಲು ಕೊಳ್ಳಲ್ಪಡುವವು, ಹೆಂಗಸರು ಕೆಡಿಸಲ್ಪಡುವರು, ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು; ಆದರೆ ಉಳಿದ ಜನರೆಲ್ಲರು ಪಟ್ಟಣದೊಳಗಿಂದ ತೆಗೆದುಬಿಡಲ್ಪಡುವದಿಲ್ಲ.
3ಆಗ ಕರ್ತನು ಹೊರಟು ಯುದ್ಧದ ದಿನದಲ್ಲಿ ಕಾದಾಟಮಾಡಿದ ಪ್ರಕಾರವೇ ಆ ಜನಾಂಗಗಳ ಸಂಗಡ ಆತನು ಕಾದಾಟ ಮಾಡುವನು.
4ಆ ದಿನದಲ್ಲಿ ಆತನ ಪಾದಗಳು ಯೆರೂಸಲೇಮಿನ ಮುಂದೆ ಪೂರ್ವ ದಿಕ್ಕಿನಲ್ಲಿರುವ ಎಣ್ಣೇ ಮರದ ಗುಡ್ಡದ ಮೇಲೆ ನಿಲ್ಲುವವು; ಎಣ್ಣೇ ಮರದ ಗುಡ್ಡವು ಅದರ ನಡುವೆಯಿಂದ ಪೂರ್ವಕ್ಕೂ ಪಶ್ಚಿಮಕ್ಕೂ ಸೀಳಿ ಬಹುದೊಡ್ಡ ತಗ್ಗಾಗುವದು; ಅರ್ಧ ಗುಡ್ಡವು ಉತ್ತರಕ್ಕೂ ಅರ್ಧ ದಕ್ಷಿಣಕ್ಕೂ ಸರಿದು ಕೊಳ್ಳುವದು.
5ನೀವು ಬೆಟ್ಟಗಳ ತಗ್ಗಿಗೆ ಓಡಿಹೋಗು ವಿರಿ; ಬೆಟ್ಟಗಳ ತಗ್ಗು ಆಚೆಲಿಗೆ ಮುಟ್ಟುವದು. ಹೌದು, ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿ ನೀವು ಭೂಕಂಪಕ್ಕೆ ಓಡಿಹೋದ ಹಾಗೆ ಓಡಿಹೋಗು ವಿರಿ; ನನ್ನ ದೇವರಾದ ಕರ್ತನು ತನ್ನ ಪರಿಶುದ್ಧರೆ ಲ್ಲರ ಸಂಗಡ ಬರುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ