ಜೆಕರ್ಯ 1:19

ಆಗ ನನ್ನ ಕೂಡ ಮಾತನಾಡಿದ ದೂತನಿಗೆ ನಾನು--ಇದೇನು ಅಂದೆನು. ಅದಕ್ಕೆ ಅವನು ನನಗೆ ಉತ್ತರಕೊಟ್ಟು--ಇವು ಯೆಹೂದವನ್ನೂ ಇಸ್ರಾಯೇಲನ್ನೂ ಯೆರೂಸ ಲೇಮನ್ನೂ ಚದರಿಸಿದ ಕೊಂಬುಗಳು ಅಂದನು.

ಸಂದರ್ಭದೊಂದಿಗೆ ಓದಿ · ಜೆಕರ್ಯ 1

17ಇನ್ನೂ ಕೂಗಿ ಹೇಳು, ಏನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಪಟ್ಟಣಗಳು ಇನ್ನು ಅಭಿವೃದ್ಧಿಯಾಗಿ ಹರಡುವವು; ಕರ್ತನು ಚೀಯೋನನ್ನು ಇನ್ನು ಆದರಿಸುವನು; ಯೆರೂಸಲೇಮನ್ನು ಇನ್ನು ಆದುಕೊಳ್ಳುವನು.

18ನಾನು ನನ್ನ ಕಣ್ಣುಗಳನ್ನು ಎತ್ತಿದಾಗ ಇಗೋ, ನಾಲ್ಕು ಕೊಂಬುಗಳನ್ನು ನೋಡಿದೆನು.

19ಆಗ ನನ್ನ ಕೂಡ ಮಾತನಾಡಿದ ದೂತನಿಗೆ ನಾನು--ಇದೇನು ಅಂದೆನು. ಅದಕ್ಕೆ ಅವನು ನನಗೆ ಉತ್ತರಕೊಟ್ಟು--ಇವು ಯೆಹೂದವನ್ನೂ ಇಸ್ರಾಯೇಲನ್ನೂ ಯೆರೂಸ ಲೇಮನ್ನೂ ಚದರಿಸಿದ ಕೊಂಬುಗಳು ಅಂದನು.

20ಆಗ ಕರ್ತನು ನನಗೆ ನಾಲ್ಕು ಬಡಗಿಯವರನ್ನು ತೋರಿಸಿದನು.

21ಆಗ ನಾನು--ಇವರು ಏನು ಮಾಡುವದಕ್ಕೆ ಬರುತ್ತಾರೆ ಅಂದೆನು. ಅದಕ್ಕೆ ಆತನು ಮಾತನಾಡಿ ಹೇಳಿದ್ದೇನಂದರೆ--ಯಾವನಾದರೂ ತಲೆಯನ್ನು ಎತ್ತದ ಹಾಗೆ ಯೆಹೂದವನ್ನು ಚದರಿಸಿದ ಕೊಂಬುಗಳು. ಆದರೆ ಇವರು ಅವರನ್ನು ಹೆದರಿಸಿ ಯೆಹೂದ ದೇಶದ ಮೇಲೆ ಅದನ್ನು ಚದರಿಸುವದಕ್ಕೆ ಕೊಂಬನ್ನು ಎತ್ತಿದ ಅನ್ಯಜನಾಂಗಗಳ ಕೊಂಬುಗಳನ್ನು ಕೆಳಗೆ ಹಾಕುವದಕ್ಕೆ ಬಂದಿದ್ದಾರೆ ಅಂದನು.

ಜೆಕರ್ಯ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी