ಯೆಹೆಜ್ಕೇಲನು 10:10

ಅವುಗಳ ಆಕಾರವು ನಾಲ್ಕಕ್ಕೂ ಒಂದೇ ರೂಪ ವಿತ್ತು; ಚಕ್ರದಲ್ಲಿ ಚಕ್ರವು ಇದ್ದ ಹಾಗೆ ಇದ್ದವು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 10

8ಕೆರೂಬಿಯರಲ್ಲಿ ಅವರ ರೆಕ್ಕೆ ಗಳ ಕೆಳಗೆ ಮನುಷ್ಯನ ಕೈಗೆ ಸಮಾನವಾದದ್ದು ಕಂಡುಬಂತು.

9ನಾನು ನೋಡಿದಾಗ ಇಗೋ, ಒಬ್ಬೊಬ್ಬ ಕೆರೂ ಬಿಯನ ಬಳಿಯಲ್ಲಿ ಒಂದು ಚಕ್ರ, ಈ ಪ್ರಕಾರ ಕೆರೂಬಿಯರ ಬಳಿಯಲ್ಲಿ ನಾಲ್ಕು ಚಕ್ರಗಳಿದ್ದವು; ಆ ಚಕ್ರಗಳ ವರ್ಣವು ಪೀತರತ್ನದ ಹಾಗೆ ಇತ್ತು.

10ಅವುಗಳ ಆಕಾರವು ನಾಲ್ಕಕ್ಕೂ ಒಂದೇ ರೂಪ ವಿತ್ತು; ಚಕ್ರದಲ್ಲಿ ಚಕ್ರವು ಇದ್ದ ಹಾಗೆ ಇದ್ದವು.

11ಅವು ಹೋಗುತ್ತಿರುವಾಗ ಅವುಗಳು ನಾಲ್ಕು ಕಡೆಗಳಲ್ಲೂ ಹೋಗುತ್ತಿದ್ದವು. ಹೋಗುವಾಗ ತಿರುಗಿ ಕೊಳ್ಳಲಿಲ್ಲ. ಆದರೆ ಅವುಗಳ ತಲೆ ಯಾವ ಸ್ಥಳವನ್ನು ನೋಡುತ್ತಿತ್ತೋ ಅಲ್ಲಿಗೆ ಅದರ ಹಿಂದೆಯೇ ಹೋದವು, ಹೋಗುವಾಗ ತಿರುಗಲಿಲ್ಲ.

12ಅವುಗಳ ಪೂರ್ತಿ ದೇಹವು, ಬೆನ್ನುಗಳು, ಕೈಗಳು, ರೆಕ್ಕೆಗಳು, ಮತ್ತು ಚಕ್ರಗಳು, ಇವುಗಳಿಗೆ ಸುತ್ತಲೂ ಕಣ್ಣುಗಳು ಇದ್ದವು. ಅಲ್ಲಿ ನಾಲ್ಕೂ ಚಕ್ರಗಳ ಮೇಲೂ ಇದ್ದವು.

ಯೆಹೆಜ್ಕೇಲನು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी