ವಿಮೋಚನಕಾಂಡ 12:6

ಅದನ್ನು ಈ ತಿಂಗಳಿನ ಹದಿನಾಲ್ಕನೆಯ ದಿನದ ವರೆಗೆ ಇಟ್ಟುಕೊಳ್ಳಬೇಕು. ತರುವಾಯ ಸಾಯಂ ಕಾಲದಲ್ಲಿ ಇಸ್ರಾಯೇಲಿನ ಕೂಟದ ಇಡೀ ಸಭೆಯು ಅದನ್ನು ಕೊಲ್ಲಬೇಕು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 12

4ಒಂದು ಕುರಿಮರಿಯನ್ನು ತಿನ್ನುವದಕ್ಕೆ ಕುಟುಂಬವು ಚಿಕ್ಕದಾಗಿದ್ದರೆ ಅವನೂ ತನ್ನ ಮನೆಗೆ ಸವಿಾಪವಾಗಿರುವ ತನ್ನ ನೆರೆಯವನೂ ವ್ಯಕ್ತಿಗಳ ಲೆಕ್ಕದ ಪ್ರಕಾರ ಒಂದನ್ನು ತಕ್ಕೊಳ್ಳಲಿ; ಒಬ್ಬೊಬ್ಬನು ತಾನು ತಿನ್ನುವ ಅಳತೆಯ ಪ್ರಕಾರ ಕುರಿಮರಿಯನ್ನು ತಕ್ಕೊಳ್ಳಲಿ.

5ನಿಮ್ಮ ಕುರಿಮರಿಯು ನಿರ್ದೋಷವಾಗಿರುವ ಒಂದು ವರುಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಮೇಕೆಗಳಿಂದಾಗಲಿ ಅದನ್ನು ತಕ್ಕೊ ಳ್ಳಬೇಕು.

6ಅದನ್ನು ಈ ತಿಂಗಳಿನ ಹದಿನಾಲ್ಕನೆಯ ದಿನದ ವರೆಗೆ ಇಟ್ಟುಕೊಳ್ಳಬೇಕು. ತರುವಾಯ ಸಾಯಂ ಕಾಲದಲ್ಲಿ ಇಸ್ರಾಯೇಲಿನ ಕೂಟದ ಇಡೀ ಸಭೆಯು ಅದನ್ನು ಕೊಲ್ಲಬೇಕು.

7ರಕ್ತದಲ್ಲಿ ಸ್ವಲ್ಪ ತೆಗೆದು ಅವರು ಊಟ ಮಾಡುವ ಮನೆಗಳ ಎರಡು ನಿಲುವು ಗಂಬಗ ಳಿಗೂ ಬಾಗಿಲ ಮೇಲಿನ ಅಡ್ಡಗಂಬಕ್ಕೂ ಹಚ್ಚಬೇಕು.

8ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ತಿನ್ನಬೇಕು. ಬೆಂಕಿಯಲ್ಲಿ ಸುಟ್ಟು ಅದನ್ನೂ ಹುಳಿಯಿಲ್ಲದ ರೊಟ್ಟಿಗ ಳನ್ನೂ ಕಹಿಯಾದ ಪಲ್ಯಗಳ ಸಂಗಡ ತಿನ್ನಬೇಕು.

ವಿಮೋಚನಕಾಂಡ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी